ನೌಕರರಿಗೆ 15% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಸರ್ಕಾರ
ನಾಲ್ಕು ನಿಗಮಗಳ ನೌಕರರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಆಗ್ರಹ
ರಾಜ್ಯಾದ್ಯಂತ ಮಾರ್ಚ್ 24ರಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿದ್ದಾರೆ.
ನಾಲ್ಕು ನಿಗಮಗಳ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಬಸ್ ಗಳನ್ನು ಸ್ಥಗಿತಗೊಳಿಸಿ ಪ್ರತಿಭಟಿಸಲು ನೌಕರರು ಮುಂದಾಗಿದ್ದಾರೆ.
ಈ ಹಿಂದೆ, ಮಾರ್ಚ್ 21ರಂದು ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಿತ್ತು. ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ 15% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆ, ಮಾ. 21ರ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿತ್ತು. ಈಗ ಚಂದ್ರಶೇಖರ್ ನೇತೃತ್ವದ ಸಮಾನ ಮನಸ್ಕರ ವೇದಿಕೆ ಸರ್ಕಾರಿ ನೌಕರರಿಗೆ ನೀಡುವಷ್ಟು ನಮಗೂ ಸಂಬಳ ನೀಡಬೇಕೆಂದು ಪಟ್ಟು ಹಿಡಿದಿದೆ. ಈ ಹಿನ್ನೆಲೆ ನಾಳೆಯಿಂದ ಮುಷ್ಕರಕ್ಕೆ ವೇದಿಕೆ ಕರೆ ನೀಡಿದೆ.
ಸಮಾನ ಮನಸ್ಕರ ವೇದಿಕೆಯ ಬೇಡಿಕೆಗಳೇನು?
• ಸರ್ಕಾರಿ ನೌಕರರಿಗೆ ಸರಿಸಮಾನ ವೇತನ ನೀಡಬೇಕು
• ನಾಲ್ಕು ನಿಗಮಗಳ ನೌಕರರ ಸಂಘಕ್ಕೆ ಚುನಾವಣೆ ನಡೆಸಬೇಕು
• ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳಬೇಕು
• ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲ ಪೊಲೀಸ್ ಪ್ರಕರಣ ಹಿಂಪಡೆಯಬೇಕು
• ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡಬೇಕು ಹಾಗೂ ಪಿಂಚಣಿ ಸೌಲಭ್ಯ ಒದಗಿಸುವುದು