ಬೆಂಗಳೂರು | 93 ವರ್ಷ ಹಳೆಯ ಶಾಲೆಯ ಗೋಡೆ ಕೆಡವಿದ ಮೂವರ ವಿರುದ್ಧ ಪ್ರಕರಣ ದಾಖಲು

Date:

ಕ್ವೀನ್ಸ್ ರಸ್ತೆಯಲ್ಲಿರುವ 93 ವರ್ಷ ಹಳೆಯ ಶಾಲೆಯಾದ ಶ್ರೀಮತಿ ಕಮಲಾಬಾಯಿ ಶಿಕ್ಷಣ ಸಂಸ್ಥೆಯ (ಎಸ್‌ಕೆಇಐ) ಕಾಂಪೌಂಡ್ ಗೋಡೆಯನ್ನು ಕೆಡವಿದ್ದಕ್ಕಾಗಿ ಬೆಂಗಳೂರು ನಗರ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ ಗುಂಪೊಂದು ಜೆಸಿಬಿ ಸಮೇತವಾಗಿ ಬಲವಂತವಾಗಿ ಶಾಲೆಯ ಆವರಣಕ್ಕೆ ನುಗ್ಗಿ ಗೋಡೆಯನ್ನು ಕೆಡವಿದೆ. ಜುಲೈ 5ರಂದು ಸಂಜೆ 4:30ಕ್ಕೆ ಘಟನೆ ನಡೆದಿದ್ದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಂಧಿತ ಮೂವರನ್ನು ಮರಿಯಾ ಎಲಿಜಬೆತ್, ಮೊಹಮ್ಮದ್ ಜಬಿ ಮತ್ತು ಜೆರಾರ್ಡ್ ಸ್ಟೀಫನ್ ಹ್ಯಾರಿ ಎಂದು ಗುರುತಿಸಲಾಗಿದೆ.

ಹ್ಯಾರಿ, ಎಲಿಜಬೆತ್ ಮತ್ತು ಜಬಿ ಜೆಸಿಬಿ ಸಮೇತವಾಗಿ ಶಾಲೆಯೊಳಗೆ ನುಗ್ಗಿದ್ದು ಭದ್ರತಾ ಸಿಬ್ಬಂದಿಗಳಾದ ಕಾರ್ತಿಕ್ ಮತ್ತು ಮುರಳಿ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ನಾಲ್ವರು ಬಾಲಕಾರ್ಮಿಕರನ್ನು ರಕ್ಷಿಸಿದ ಅಧಿಕಾರಿಗಳು

ಎಲಿಜಬೆತ್ ಮತ್ತು ಶಾಲಾ ಆಡಳಿತದ ನಡುವಿನ 25 ವರ್ಷಗಳ ಆಸ್ತಿ ವಿವಾದದ ಕಾರಣ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಶಾಲಾ ಕ್ಯಾಂಪಸ್‌ನ ಒಂದು ಭಾಗವು ತನಗೆ ಸೇರಿದೆ ಎಂದು ಎಲಿಜಬೆತ್ ಹೇಳಿಕೊಂಡಿದ್ದಾರೆ. ಆದರೆ ಶಾಲೆಯ ಆಡಳಿತ ಮಾತ್ರ ಮುನ್ಸಿಪಲ್ ಕಾರ್ಪೊರೇಷನ್‌ನಿಂದ 10 ಎಕರೆ ಆಸ್ತಿಯನ್ನು ಖರೀದಿಸಿದೆ ಎಂದು ಹೇಳಿಕೊಳ್ಳುತ್ತಿದೆ. ತನ್ನ ಮುತ್ತಜ್ಜ ರಕ್ಷಣೆಯ ಸೇವೆ ಸಲ್ಲಿಸಿದ ಕಾರಣ ಆಸ್ತಿಯನ್ನು ಸರ್ಕಾರವು ತನಗೆ ನೀಡಿದೆ ಎಂದು ಹೇಳಿಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

“ಪ್ರಸ್ತುತ, ಆಸ್ತಿ ವಿವಾದವು ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಂಗ ಪರಿಶೀಲನೆಯಲ್ಲಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...