- ಬೆಂಗಳೂರಿನಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ
- ಏ.21ರಂದು ಬೆಳಗಾವಿಯಲ್ಲಿ ಒಂದು ಗಂಟೆ ಕಾಲ ಸುರಿದ ಮಳೆ
ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ, ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?
ಕರಾವಳಿ, ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ವಿಜಯನಗರ, ಶಿವಮೊಗ್ಗ, ಹಾಸನ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬನ್ನೇರುಘಟ್ಟ ಉದ್ಯಾನವನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆನೆ ಸಾವು
ಬೆಂಗಳೂರಿನಲ್ಲಿ ಏ.21ರ ಸಾಯಂಕಾಲ ಮೋಡ ಕವಿದ ವಾತಾವರಣ ಇದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಗುಡುಗು ಸಹಿತ ಭಾರೀ ಮಳೆ
ಏ.21ರಂದು ಬೆಳಗಾವಿಯಲ್ಲಿ ಗಾಳಿ ಸಹಿತ ನಿರಂತರ ಒಂದು ಗಂಟೆಗಳ ಕಾಲ ಮಳೆಯಾಗಿದೆ. ಹಾಸನ, ಗದಗ ಜಿಲ್ಲೆ ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.