- ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ
- ಬಾಗಲಕೋಟೆಯಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು
ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಶನಿವಾರ ಹಾಗೂ ಭಾನುವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 9 ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ಘೋಷಿಸಿದೆ.
ಬೆಂಗಳೂರು, ಬೀದರ್, ಕಲಬುರಗಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಶುಕ್ರವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (36.6 ಡಿಗ್ರಿ ಸೆಲ್ಸಿಯಸ್) ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ (14.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ.
ಬೆಂಗಳೂರಿನಲ್ಲಿ ಶನಿವಾರ ಸಾಯಂಕಾಲ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಹೇಳಿದೆ.