ಹುಲಿ ಉಗುರು | ಜೈಲು ಸೇರಿದ್ದ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ಗೆ ಜಾಮೀನು

Date:

ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನವಾಗಿದ್ದ ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

- Advertisement -

₹4 ಸಾವಿರ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ನ್ಯಾಯಾಲಯ ಷರತ್ತು ಹಾಕಿದೆ. ಅಕ್ಟೋಬರ್​ 27ರಂದು ಸಂಜೆ ವೇಳೆಗೆ ವರ್ತೂರು ಸಂತೋಷ್ ಅವರು ಬಿಡುಗಡೆ ಆಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿರುವ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬಿಗ್ ಬಾಸ್ ರಿಯಾಲಿಟಿ ಶೋ ನಡೆಯುವಾಗಲೇ ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದರು. ಈ ವೇಳೆ, ಸಂತೋಷ್​ ಧರಿಸಿದ ಹುಲಿ ಉಗುರನ್ನು ವಶಕ್ಕೆ ಪಡೆದುಕೊಂಡಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನವಾಗುತ್ತಿದ್ದಂತೆ ಜಾಮೀನು ಕೋರಿ ಅರ್ಜಿ​ ಸಲ್ಲಿಸಿದ್ದರು. ಅ.27ರಂದು ಎರಡನೇ ಎಸಿಜೆಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.

ಅ. 26ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಎರಡನೇ ಎಸಿಜೆಎಂ ನ್ಯಾಯಾಲಯವು ಅ.27ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರ್ಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಿಚಾರಣೆ ಮಂಡಿಸಿದರು.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | 100 ದಿನದಲ್ಲಿ 718 ಮೀಟರ್ ಸುರಂಗ ಕೊರೆದು ಹೊರಬಂದ ‘ಟಿಬಿಎಂ ರುದ್ರ’

ವಿಚಾರಣೆ ನಡೆಸಿ ಆಕ್ಷೇಪಣಾ ಅರ್ಜಿಯನ್ನು ಬುಧವಾರ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿತ್ತು. ಅ.25ರಂದು ಆಕ್ಷೇಪಣಾ ಅರ್ಜಿ ಸಲ್ಲಿಸದೆ ಒಂದು ದಿನ ಕಾಲಾವಕಾಶ ಪಡೆದು ಸರ್ಕಾರಿ ಅಭಿಯೋಜಕರು ಅ.26ರಂದು ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದರು.

ಸದ್ಯ ವರ್ತೂರು ಸಂತೋಷ್ ಅವರು ಜಾಮೀನಿನ ಮೇಲೆ ಹೊರಬಂದಿದ್ದು, ಮತ್ತೆ ಅವರು ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಾರಾ ಎಂಬ ಕುತೂಹಲ ಮೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...