ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್​ ಆರಂಭ: ಗೃಹ ಸಚಿವ ಜಿ ಪರಮೇಶ್ವರ್

Date:

Advertisements

ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಈ ಟ್ರಾಫಿಕ್​ ಸಮಸ್ಯೆಗೆ ಕಡಿವಾಣ ಹಾಕಲು ಮತ್ತೆ ಟೋಯಿಂಗ್​ ಪ್ರಾರಂಭಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೆ ಟ್ರಾಫಿಕ್ ಸಮಸ್ಯೆಗೆ ಟೋಯಿಂಗ್ ಮಾಡಲಾಗುತ್ತಿತ್ತು. ಮತ್ತೆ ಅದನ್ನು ಜಾರಿಗೆ ತರುತಿದ್ದೇವೆ. ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕ ದಳದವರನ್ನು ಬಳಸಿಕೊಂಡು ಟೋಯಿಂಗ್ ಮಾಡುತ್ತೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತೆಗೆದುಕೊಂಡಿದ್ದೇನೆ. ಬಿಬಿಎಂಪಿ ಮತ್ತು ಪೊಲೀಸರು ಒಟ್ಟಾಗಿ ಕಾರ್ಯಚರಣೆ ಮಾಡಿದರೆ ಟ್ರಾಫಿಕ್​ ಸಮಸ್ಯೆ ಬಗೆಹರಿಯುತ್ತದೆ. ಬೆಂಗಳೂರಿನ 19 ಕಡೆ ಹೆಚ್ಚು ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದಕ್ಕೆ ಕಾರಣವನ್ನು ಎಂದು ಟ್ರಾಫಿಕ್​ ಪೊಲೀಸರು ಗುರುತಿಸಿದ್ದಾರೆ. ಒಂದು ವಾರದ ಒಳಗೆ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ. ಟ್ರಾಫಿಕ್​ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

Advertisements

ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಸಾಕಷ್ಟು ಕ್ರಮ ತಡಗೆದುಕೊಂಡಿದ್ದೇವೆ. ಮಹಿಳೆಯರ ಸುರಕ್ಷತೆ ಸಲುವಾಗಿ ಬೆಂಗಳೂರು ನಗರದಲ್ಲಿ 9 ಸಾವಿರ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಗರದಲ್ಲಿ 30 ಸೇಫ್ಟಿ ಐಲ್ಯಾಂಡ್ ಸ್ಥಾಪಿಸಿದ್ದೇವೆ. ರಾತ್ರಿ ವೇಳೆ ಮಹಿಳೆಯರು ಓಡಾಡುವ ಕಗ್ಗತ್ತಲ ಪ್ರದೇಶಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ. ನಿರ್ಭಯ ಯೋಜನೆಯಡಿ ಕೇಂದ್ರ ಸರ್ಕಾರ 667 ಕೋಟಿ ರೂ. ನೀಡಿದೆ. ಈ ಹಣವನ್ನು ಮಹಿಳೆಯರ ಸುರಕ್ಷತೆಗಾಗಿ ಖರ್ಚು ಮಾಡಿದ್ದೇವೆ. ಬೆಂಗಳೂರು ಸುರಕ್ಷಿತ ನಗರಗಳಲ್ಲಿ ಒಂದು ಎಂದು ಹೈದರಾಬಾದ್​ನ ಸಂಸ್ಥೆಯೊಂದು ವರದಿ ನೀಡಿದೆ. ಇನ್ನೂ ಹೆಚ್ಚಿನ ಪರಿಣಾಮಕಾರಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಆಡಳಿತಕ್ಕೆ 11 ವರ್ಷ; ದೇಶ ಉದ್ಧಾರವಾಯಿತೇ?

ಬೆಂಗಳೂರಿನಲ್ಲಿ ಮಾದಕ ವಸ್ತುವನ್ನು ನಿಯಂತ್ರಣಕ್ಕೆ ತಂದಿದ್ದೇವೆ. ಇನ್ನೂ ಅನೇಕ‌ ಕಡೆ ಮಾದಕ ವಸ್ತು ಸಿಗುತ್ತಿದೆ. ಈ ಬಗ್ಗೆ ಮಾಹಿತಿ ಇದೆ. ಮಾದಕ ವಸ್ತು ಮಾರಾಟ ಸಂಬಂಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಯಾ ಇನ್ಸ್​​ಪೆಕ್ಟರ್​ಗಳು ಜವಾಬ್ದಾರಿಯಾಗಿರುತ್ತಾರೆ. ಮಾದಕ ವಸ್ತು​ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ಕೆಲವು ಸೂಚನೆ ನೀಡಿದ್ದೇನೆ ಎಂದರು.

ಪೊಲೀಸರು ಜನಸ್ನೇಹಿಯಾಗಿರಬೇಕು ಎಂದು ಮನೆ ಮನೆಗೆ ಪೊಲೀಸ್ ಎಂಬ ಹೊಸ ಕಾರ್ಯಕ್ರಮ ಆರಂಭಿಸುತ್ತಿದ್ದೇವೆ. ದೂರು‌ ಕೊಡಲು ಹೆದರುವವರಿಗೆ ಈ ಕಾರ್ಯಕ್ರಮ ಸಹಾಯಕವಾಗಲಿದೆ. ರಾಜ್ಯ ವ್ಯಾಪ್ತಿ ಇದನ್ನು ಜಾರಿಗೆ ತರುತ್ತೇವೆ. ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕಾನೂನು, ಟ್ರಾಫಿಕ್​ ನಿಯಮ ಮತ್ತು ಮಾದಕ ವಸ್ತುವಿನಿಂದಾಗುವ ಮಾರಕದ ಬಗ್ಗೆ ತಿಳಿಸುತ್ತಾರೆ. ಶಾಲಾ-ಕಾಲೇಜುಗಳಲ್ಲಿ ನಡೆಯುವ ಪಾಲಕರ ಸಭೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಇರಬೇಕು. ರಿಯಲ್ ಎಸ್ಟೇಟ್​ ದಂಧೆಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಪೊಲೀಸರ ಭ್ರಷ್ಟಾಚಾರ ಬಗ್ಗೆ ಸಾಕಷ್ಟು ಮಾತಿದೆ. ಅದರ ಬಗ್ಗೆಯೂ ಕಠಿಣ ಸೂಚನೆ ಕೊಟ್ಟಿದ್ದೇನೆ. ಸೈಬರ್ ಅಪರಾಧ ವಿಭಾಗಕ್ಕೆ ಹೊಸ ನಿಯಮ ಜಾರಿಗೆ ತರುತ್ತೇವೆ. ಸೈಬರ್ ಅಪರಾಧ ತಡೆಗಟ್ಟಲು ಹೊಸ ಇಲಾಖೆ, ಹೊಸ ಡಿಜಿಪಿ ಹುದ್ದೆ ಸೃಷ್ಟಿಸಲಾಗುತ್ತದೆ. ದೇಶದಲ್ಲೇ ಮೊದಲ ಬಾರಿಗೆ ಹೊಸ ಇಲಾಖೆ ಆರಂಭಿಸುತ್ತಿದ್ದೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿ.ಕೆ.ಶಿವಕುಮಾರ್

ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ,...

ನಗರ್ತಪೇಟೆ ಅಗ್ನಿ ಅವಘಡ | ಗೃಹ ಸಚಿವ ಪರಮೇಶ್ವರ್‌, ಸಚಿವ ಜಮೀರ್‌ ಅಹಮದ್‌ ಖಾನ್ ಭೇಟಿ

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ...

Download Eedina App Android / iOS

X