ರೈಲು ಅಪಘಾತ | ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಮಾರ್ಗ ಬದಲು

Date:

Advertisements

ತಮಿಳುನಾಡಿನ ಕವರೈಪೆಟ್ಟೆ ರೈಲು ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಮೈಸೂರು –ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಪರಿಣಾಮ ಶನಿವಾರ (ಅ.12) ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಮಾರ್ಗ ಬದಲಾಯಿಸಲಾಗಿದೆ.

ಮೇಲ್‌ಪಕ್ಕಂ ಹಾಗೂ ರಾಣಿಗುಂಟ ಮಾರ್ಗವಾಗಿ ರೈಲುಗಳು ಸಂಚರಿಸಲಿವೆ. ಶನಿವಾರ ಬೆಳಿಗ್ಗೆ 8.50 ರ ಎಸ್‌ಎಂವಿಟಿ ಬೆಂಗಳೂರು– ಕಾಮಾಕ್ಯ (ರೈಲು ಸಂಖ್ಯೆ: 12551) ಎ.ಸಿ ಎಕ್ಸ್‌ಪ್ರೆಸ್‌ ರೈಲು ಧರ್ಮಾವರಂ, ವಿಜಯವಾಡ ಮಾರ್ಗವಾಗಿ ಚಲಿಸಲಿದೆ.ಇದರಿಂದಾಗಿ ಜೋಳರಪೆಟ್ಟೈ, ಕಟ್ಪಾಡಿ, ಪೆರಂಬೂರು ಹಾಗೂ ಗೂಡೂರು ನಿಲ್ದಾಣಗಳು ಬಿಟ್ಟು ಹೋಗಲಿವೆ.

ಬೆಳಿಗ್ಗೆ 9.15ಕ್ಕೆ ಹೊರಡುವ ಎಸ್‌ಎಂವಿಟಿ ಬೆಂಗಳೂರು–ದಾನಾಪುರ ಸಂಗಮಿತ್ರ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ:12295) ರೈಲು, ಧರ್ಮಾವರಂ, ಕಾಜೀಪೇಟ್ ಮಾರ್ಗವಾಗಿ ಪ್ರಯಾಣಿಸಲಿದೆ. ಕೆ.ಆರ್‌. ಪುರ, ಬಂಗಾರಪೇಟೆ, ಕುಪ್ಪಂ, ಜೋಳರಪೆಟ್ಟೈ, ಕಟ್ಪಾಡಿ, ಆರಕೋಣಂ, ಪೆರಂಬೂರ್, ಗೂಡೂರ್, ನೆಲ್ಲೂರು, ಒಂಗೋಲ್, ವಿಜಯವಾಡ ಹಾಗೂ ವಾರಂಗಲ್ ನಿಲ್ದಾಣಗಳು ತಪ್ಪಲಿವೆ.

Advertisements

ಶುಕ್ರವಾರ ರಾತ್ರಿ 11.30ಕ್ಕೆ ಹೊರಟಿರುವ ಎಸ್‌ಎಂವಿಟಿ ಬೆಂಗಳೂರು–ಗುವಾಹಟಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ: 12509) ಮೇಲ್ಪಕ್ಕಂ, ರಾಣಿಗುಂಟ ಮಾರ್ಗದಲ್ಲಿ ಪ್ರಯಾಣಿಸುತ್ತಿದೆ. ಆರಕೋಣಂ ಹಾಗೂ ಪೆರಂಬೂರ್ ನಿಲ್ದಾಣಗಳು ತಪ್ಪಿಹೋಗಲಿದ್ದು, ಈ ರೈಲಿಗೆ ತಿರುತ್ತಣಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X