ಬೆಂಗಳೂರಿನಲ್ಲಿ ತ್ರಿವಳಿ ಕೊಲೆ: ತಾಯಿ, ಅಜ್ಜಿ, ಮಾವನನ್ನು ಕೊಂದ ಯುವಕ ತಾನೂ ಆತ್ಮಹತ್ಯೆ

Date:

ಕೆ.ಆರ್.ಪುರಂ ವ್ಯಾಪ್ತಿಯಲ್ಲಿ ಪ್ರಿಯಕರನೊಂದಿಗೆ ಸೇರಿ ಶ್ವೇತಾ ಎಂಬುವವಳು ನಡೆಸಿದ್ದ ತ್ರಿವಳಿ ಕೊಲೆ ಪ್ರಕರಣದ ಆಘಾತ ಮಾಸುವ ಮುನ್ನವೇ, ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ತ್ರಿವಳಿ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕನೊಬ್ಬ ತನ್ನ ಹೆತ್ತ ತಾಯಿ, ಅಜ್ಜಿ ಹಾಗೂ ಮಾವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿರುವ ಗಣೇಶ ದೇವಸ್ಥಾನದ ಸಮೀಪದ ನಿವಾಸದಲ್ಲಿ ಈ ಭೀಕರ ಕೃತ್ಯ ನಡೆದಿದೆ. ತಾಯಿ ಮಂಗಳಮ್ಮ (55), ಅಜ್ಜಿ ನಂಜಮ್ಮ (65) ಹಾಗೂ ಮಾವ ಸತೀಶ್ (50) ಕೊಲೆಯಾದ ದುರ್ದೈವಿಗಳು. ಇವರನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಶಾಂತ್ (34) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಮೃತ ಕುಟುಂಬಸ್ಥರು ಕಳೆದ ಏಳೆಂಟು ವರ್ಷಗಳಿಂದ ಕೊಟ್ಟಿಗೆಪಾಳ್ಯದ ಈ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ವೃತ್ತಿಯಲ್ಲಿ ಚಾಲಕನಾಗಿದ್ದ ಆರೋಪಿ ಪ್ರಶಾಂತ್, ಕಳೆದ ಒಂದು ವರ್ಷದಿಂದ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಉಳಿದಿದ್ದನು. ಇಂದು ಆತನ ತಂದೆ ಎಂದಿನಂತೆ ಕೆಲಸಕ್ಕೆ ತೆರಳಿದ್ದ ವೇಳೆ, ಮನೆಯಲ್ಲಿದ್ದ ಪ್ರಶಾಂತ್ ಏಕಾಏಕಿ ಮಾರಕಾಸ್ತ್ರದಿಂದ ಕುಟುಂಬಸ್ಥರ ಮೇಲೆ ದಾಳಿ ನಡೆಸಿದ್ದಾನೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಸುರಕ್ಷತೆ ಕೇವಲ ರಾಜಕೀಯ ಭಾಷಣದ ಸರಕಾಗದಿರಲಿ

ಮನೆಯ ಮುಖ್ಯದ್ವಾರದ ಬಳಿಯೇ ತಾಯಿ ಮಂಗಳಮ್ಮ ಹಾಗೂ ಅಜ್ಜಿ ನಂಜಮ್ಮನ ಮೇಲೆ ಮುಗಿಬಿದ್ದ ಆತ, ಇಬ್ಬರನ್ನೂ ಕೊಚ್ಚಿ ಕೊಂದಿದ್ದಾನೆ. ಬಳಿಕ ಮಾವ ಸತೀಶ್ ಅವರನ್ನು ಕೊಠಡಿಯೊಳಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮೂವರನ್ನು ಹತ್ಯೆಗೈದ ಬಳಿಕ ಆರೋಪಿ ಪ್ರಶಾಂತ್ ಮನೆಯಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತನ ರಕ್ತಸಿಕ್ತ ಸ್ಥಿತಿ ಹಾಗೂ ಅನುಮಾನಾಸ್ಪದ ವರ್ತನೆಯನ್ನು ಗಮನಿಸಿದ ಮನೆ ಮಾಲೀಕರು, ತಕ್ಷಣವೇ ಆತನನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿ ಹೊರಗಿನಿಂದ ಬೀಗ ಜಡಿದಿದ್ದಾರೆ. ಪರಾರಿಯಾಗಲು ದಾರಿಯಿಲ್ಲದೆ ಕೊಠಡಿಯೊಳಗೆ ಸಿಕ್ಕಿಬಿದ್ದ ಆರೋಪಿ ಪ್ರಶಾಂತ್, ಅದೇ ರೂಮ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಷಯ ತಿಳಿದ ತಕ್ಷಣ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದೇ ಕುಟುಂಬದ ಮೂವರ ಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಪ್ರಾಥಮಿಕ ಹಂತದಲ್ಲಿ ತಿಳಿದುಬಂದಿಲ್ಲ. ಆರೋಪಿಯು ಕೆಲಸವಿಲ್ಲದೆ ಮನೆಯಲ್ಲಿದ್ದ ವಿಚಾರಕ್ಕೆ ಸಂಬಂಧಿಸಿದ ಜಗಳ ಅಥವಾ ಬೇರಾವುದೇ ಕೌಟುಂಬಿಕ ಕಲಹ ಈ ಭೀಕರ ಕೃತ್ಯಕ್ಕೆ ಕಾರಣವಾಯಿತೇ ಎಂಬ ನಿಟ್ಟಿನಲ್ಲಿ ಪೊಲೀಸರು ಸಮಗ್ರ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

SIR | ಸಿಜೆಪಿ ಪ್ರತಿಭಟನೆ – ದೆಹಲಿ ದಿಗ್ಭಂದನ; ‘ಸರ್ಕಾರದ ದಮನ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ’: ಅಭಿಜಿತ್ ದೀಪ್ಕೆ ಕಿಡಿ

ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್...

SIR | ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯಲ್ಲಿ 1,000 ಮಂದಿ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...