ಬೆಂಗಳೂರು: 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ

Date:

ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ‌ 70 ಜನರನ್ನು ಬಂಧಿಸಲಾಗಿದ್ದು, ಎರಡೂವರೆ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​​ ಸೇರಿದಂತೆ, ವಿವಿಧ ಮಾದಕ ವಸ್ತು ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

- Advertisement -

ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ‌
ರೆಸ್ಟೋರೆಂಟ್, ಹೋಟೆಲ್ ಮತ್ತು ಪಬ್​ಗಳನ್ನು ಹೊಸ ವರ್ಷಾಚರಣೆ ದಿನ (ಡಿಸೆಂಬರ್​.31) ರಂದು ರಾತ್ರಿ 1 ಗಂಟೆಯ ಒಳಗಾಗಿ ಬಂದ್​​ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಅಂದು, ನಶೆಯಲ್ಲಿ ಮೇಲ್ಸೇತುವೆಗಳ ಮೇಲೆ ರಂಪಾಟ ಮಾಡುವ, ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೇಲ್ಸೇತುವೆ ಸೇರಿದಂತೆ ನಗರದ ಎಲ್ಲ ಮೇಲ್ಸೇತುವೆಗಳನ್ನು ಬಂದ್​ ಮಾಡಲಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೆಂಗಳೂರು ಹೊರ ವಲಯದಲ್ಲಿ ನಡೆಯುವ ರೇವ್ ಪಾರ್ಟಿ ಸೇರಿದಂತೆ ಎಲ್ಲ ಪಾರ್ಟಿಗಳ ಮೇಲೆ ಕಣ್ಣಿಡಲಾಗಿದೆ. ಇನ್ನು, ನಗರದಲ್ಲಿ ಎಂಜಿ ರೋಡ್, ಬ್ರಿಗೆಡ್ ರೋಡ್, ಕೋರಮಂಗಲ, ಇಂದಿರಾನಗರ ಸೇರಿ ಎಲ್ಲಿ ಹೆಚ್ಚು ಜನರು ಸೇರುತ್ತಾರೆ ಅಲ್ಲಿ ಸೇಫ್ಟಿ ಐಲ್ಯಾಂಡ್, ಸಿಸಿಟಿವಿ, ಡ್ರೋಣ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಶ್ವಾನದಳದಿಂದ ತಪಾಸಣೆ ಮಾಡಲಾಗುತ್ತೆ. ಹೆಚ್ಚಿನ ಲೈಟಿಂಗ್ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ, ಅಗ್ನಿಶಾಮಕ ದಳ ವಾಹನ ಇರುತ್ತದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿಸಿಟಿವಿ ಅಳವಡಿಸಿ, ಸೆಕ್ಯುರಿಟಿ ನೇಮಿಸಿದರಷ್ಟೇ ಮಹಿಳಾ ಸುರಕ್ಷತೆ ಸಾಧ್ಯವೇ?

ಬ್ರಿಗೆಡ್, ಎಂಜಿ ರೋಡ್​​ನಲ್ಲಿ ಏಕಮುಖ ಸಂಚಾರವಿರುತ್ತದೆ. ಡಿಸೆಂಬರ್​ 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಸೈಬರ್ ವಂಚನೆಗೆ ಒಳಗಾಗಿದ್ದರೆ ಟೋಲ್ ಫ್ರೀ ನಂಬರ್ 1930ಗೆ ಕರೆ ಮಾಡಿ ಮಾಹಿತಿ ನೀಡಿ. ಅದನ್ನ ಹೊರತುಪಡಿಸಿ ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ನಂಬರ್​​ಗೆ ಕರೆ ಮಾಡಬೇಡಿ. ಏಕೆಂದರೆ, ಅಧಿಕಾರಿಗಳು ಬೇರೆ ಕೆಲಸದಲ್ಲಿ ನಿರತರಾಗಿದ್ದರೆ ಕೂಡಲೇ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, 1930 ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡರು.

ಚಿನ್ನದ ಅಂಗಡಿ ಮಾಲೀಕರಿಗೆ ವಂಚನೆ ಮಾಡಿದ ಪ್ರಕರಣ ಸಂಬಂಧ ಎರಡು ಪ್ರಕರಣ ದಾಖಲಾಗಿವೆ. ಎರಡೂ ವಂಚನೆ ಪ್ರಕರಣದ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ದಾಖಲಾಗಿರುವ ಸೆಕ್ಷನ್​ಗಳ ಆಧಾರದಲ್ಲಿ, ಆರೋಪಿಗಳ ಸಹಕಾರದ ಅನ್ವಯ ಬಂಧನ ಮಾಡಲಾಗುವುದು. ಚಂದ್ರಾಲೇಔಟ್ ಠಾಣೆ ಪ್ರಕರಣದ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತೇವೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...