ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಎರಡು ದಿನ ‘ನಮ್ಮ ರಸ್ತೆ’ ಪ್ರದರ್ಶನ ಮತ್ತು ಕಾರ್ಯಾಗಾರ ಆಯೋಜನೆ

Date:

“ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೊಳಿಸಲಾಗುವುದು” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಜಾಗತಿಕ ರಸ್ತೆ ಸುರಕ್ಷತೆಗಾಗಿ ಬಿಬಿಎಂಪಿಯು ‘ಬ್ಲೂಮ್‌ಬರ್ಗ್ ಫಿಲಾಂತ್ರಪಿಸ್ ಇನಿಶಿಯೇಟಿವ್’ ಅಡಿಯಲ್ಲಿ ಜ್ಞಾನ ಪಾಲುದಾರರಾಗಿ ಡಬ್ಲ್ಯುಆರ್‌ಐ ಇಂಡಿಯಾದ ಸಹಭಾಗಿತ್ವದಲ್ಲಿ ಡಿ.8 ಹಾಗೂ 9ರಂದು 2 ದಿನಗಳ ಕಾಲ ಪಾಲಿಕೆ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ‘ನಮ್ಮ ರಸ್ತೆ’ (ನಮ್ಮ ಬೀದಿಗಳು) ಪ್ರದರ್ಶನ ಹಾಗೂ ಕಾರ್ಯಾಗಾರ ನಡೆಲಿದೆ. ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶುಕ್ರವಾರ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಗಾರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಮ್ಮ ರಸ್ತೆ ಎಂಬ ವಿಶಿಷ್ಟ ಅಭಿಯಾನವು ಬ್ರಾಂಡ್ ಬೆಂಗಳೂರು ನಿರ್ಮಾಣ ಮಾಡಲು ಸಾಕಷ್ಟು ಸಹಕಾರಿಯಾಗಲಿದೆ. ಇದರಿಂದ ಬೆಂಗಳೂರಿನಲ್ಲಿ ಸಕ್ರಿಯ ಸಾರಿಗೆಯನ್ನು ಉತ್ತೇಜಿಸಲು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸಲು, ಪಾದಚಾರಿ-ಸ್ನೇಹಿ ಬೀದಿಗಳು, ಸೈಕ್ಲಿಂಗ್‌ಗಾಗಿಯೇ ಮೀಸಲಾದ ಪ್ರತ್ಯೇಕ ಲೇನ್‌ಗಳು ಮತ್ತು ಹಸಿರುಮಯವಾದ ಸ್ಥಳಗಳನ್ನು ಸೃಷ್ಟಿಸಲು ಸಹಕಾರಿಯಾಗಲಿದೆ.

ಬೆಂಗಳೂರಿನ ರಸ್ತೆಗಳನ್ನು ನಾಗರಿಕ ಬಳಕೆದಾರರಿಗೆ ಸುರಕ್ಷಿತವಾಗಿರಿಸಲು, ಎಲ್ಲ ತರಹದ ಬಳಕೆದಾರರು ಉಪಯೋಗಿಸುವಂತಾಗಲು, ಸ್ಥಿತಿಸ್ಥಾಪಕವಾಗಿಸಲು ಬೇಕಾದ ಎಲ್ಲ ಪರಿಹಾರಗಳನ್ನು ಆಲೋಚಿಸಲು ಹಾಗೂ ಸಲಹೆಗಳನ್ನು ಪಡೆಯಲು ಸೇರಿದಂತೆ ಇನ್ನಿತರೆ ಚರ್ಚೆಗಳು ಸಮಾವೇಶದಲ್ಲಿ ನಡೆಯಲಿದೆ.

ನಗರದಲ್ಲಿ ಸುರಕ್ಷಿತ ರಸ್ತೆಗಳನ್ನು ಸಿದ್ಧಪಡಿಸುವ ಸಲುವಾಗಿ ಕಾರ್ಯಾಗಾರದಲ್ಲಿ ಅನುಭವಗಳನ್ನು ಹಂಚಿಕೊಳ್ಳಲು ನಾಗರಿಕರು, ನಾಗರಿಕ ಸಂಸ್ಥೆಗಳು, ವಿನ್ಯಾಸಕರು, ನಾನಾ ಶೈಕ್ಷಣಿಕ ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಎಲ್ಲರಿಗೂ ಮುಕ್ತ ಪ್ರವೇಶವಿರಲಿದ್ದು, ಸಮಾವೇಶದಲ್ಲಿ ಎರಡು ದಿನಗಳ ಕಾಲ ಪಾಲಿಕೆಯ ಎಂಜಿನಿಯರ್‌ಗಳೊಂದಿಗೆ ತರಬೇತಿ ಕಾರ್ಯಾಗಾರ ಕೂಡಾ ನಡೆಯಲಿದೆ.

ನಮ್ಮ ರಸ್ತೆ

ನಗರದಲ್ಲಿ ಮೆಟ್ರೋ ಜಾಲ, ಉಪನಗರ ರೈಲು ಸೌಲಭ್ಯಗಳು ಮತ್ತು ಬಸ್‌ಗಳ ಸೇವೆಗಳ ತ್ವರಿತ ವಿಸ್ತರಣೆಯೊಂದಿಗೆ ಬೆಂಗಳೂರು ನಿರ್ಣಾಯಕ ಹಂತದಲ್ಲಿದೆ. ಈ ಎಲ್ಲ ಪ್ರಯತ್ನಗಳ ಯಶಸ್ಸು ಸಂಪೂರ್ಣ ಸಂಪರ್ಕಿತ ಸಾರಿಗೆ ವ್ಯವಸ್ಥೆಗಳು ಮತ್ತು ಪಾದಚಾರಿ ಮೂಲಸೌಕರ್ಯಗಳ ಯೋಜನೆ, ವಿನ್ಯಾಸ ಮತ್ತು ಕಾರ್ಯಾಚರಣೆಗೊಳಿಸುವಿಕೆಯ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಸಂಯೋಜಿತ ವ್ಯವಸ್ಥೆ ಜನರನ್ನು ಒಂದು ಸಾರಿಗೆ ವಿಧಾನದಿಂದ ಇನ್ನೊಂದು ಸಾರಿಗೆ ವಿಧಾನಕ್ಕೆ ಸರಳವಾಗಿ ಮತ್ತು ಸುರಕ್ಷಿತವಾಗಿ ಬದಲಾಯಿಸಲು ಅನುಕೂಲ ಮಾಡಿಕೊಡುತ್ತದೆ. ಈ ನಿಟ್ಟಿನಲ್ಲಿ ಸಮಾವೇಶದಲ್ಲಿ ಚರ್ಚಿಸಿ ಬಂದಂತಹ ಉತ್ತಮ ಸಲಹೆಗಳನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೋಂ ವರ್ಕ್‌ ಮಾಡದಿದ್ದಕ್ಕೆ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಶಿಕ್ಷಕಿ

ಪ್ರಸಕ್ತ ಸಾಲಿನಲ್ಲಿ ಪಾಲಿಕೆಯು ಸುರಕ್ಷಾ 75 ಮಿಷನ್ 2023ರಡಿ ನಗರದ 75 ನಿರ್ಣಾಯಕ ಜಂಕ್ಷನ್‌ಗಳಲ್ಲಿ ಮರು ವಿನ್ಯಾಸ ಮಾಡುತ್ತಿದ್ದು, ಅಭಿವೃದ್ಧಿಯ ಕಾರ್ಯ ಪ್ರಗತಿಯಲ್ಲಿದೆ. ಇದು ಜನರ ಕೇಂದ್ರಿತ ಜಂಕ್ಷನ್ ವಿನ್ಯಾಸಗಳನ್ನು ರಚಿಸುವ ಗುರಿಯನ್ನು ಹೊಂದಿದ್ದು, ಇದರಿಂದ ಸುರಕ್ಷಿತ, ಪರಿಣಾಮಕಾರಿ ಮತ್ತು ಸುಲಲಿತವಾಗಿ ಪ್ರವೇಶಿಸುವಂತೆ ಮಾಡುತ್ತದೆ.

ದೊಡ್ಡ ಸಮಸ್ಯೆಗಳಿಗೆ ಸರಳ ವಿನ್ಯಾಸ ಪರಿಣಾಮಗಳು

• ರಸ್ತೆಗಳ ಮಧ್ಯೆಯಿರುವ ಸ್ಥಳವನ್ನು ಆಶ್ರಯ ದ್ವೀಪವಾಗಿ ನಿರ್ಮಾಣ ಮಾಡುವುದು.
• ಸ್ಪೀಡ್ ಹಂಪ್‌ಗಳ ನಿರ್ಮಾಣ ಮಾಡುವುದು.
• ರಸ್ತೆ ಮಾರ್ಕಿಂಗ್ ಮಾಡುವುದು.
• ರಸ್ತೆಯ ಮೀಡಿಯನ್ ಭಾಗದಲ್ಲಿ ಪಾದಚಾರಿಗಳು ನಿಲ್ಲಲು ವ್ಯವಸ್ಥೆ ಮಾಡುವುದು.
• ಪಾದಚಾರಿಗಳಲ್ಲಿ ಕರ್ಬ್ ವಿಸ್ತರಿಸುವುದು.
• ನಾಗರಿಕರ ಅನುಕೂಲಕ್ಕಾಗಿ ಸೈನೇಜ್‌ಗಳ ಅಳವಡಿಕೆ.
• ಎತ್ತರದ ಪಾದಚಾರಿ ಕ್ರಾಸಿಂಗ್ ನಿರ್ಮಾಣ ಮಾಡುವುದು.
• ಮಲ್ಟಿ ಯುಟಿಲಿಟಿ ಸೈಡ್ ವಾಕ್ ಜೋನ್ ನಿರ್ಮಾಣ ಮಾಡುವುದು.
• ರಸ್ತೆ ಬದಿಯ ಕಟ್ಟಡ ಪ್ರವೇಶದ ಬಳಿ ಸುರಕ್ಷಿತ ವಿನ್ಯಾಸ ನಿರ್ಮಿಸುವುದು.
• ಕಾಂಪ್ಯಾಕ್ಟ್ ಇಂಟರ್ ಸೆಕ್ಷನ್‌ಗಳ ನಿರ್ಮಾಣ.
• ವಾಹನಗಳ ವೇಗ ನಿಯಂತ್ರಿಸಲು ರಂಬಲ್ ಸ್ಟ್ರಿಪ್ಸ್ ಅಳವಡಿಕೆ.
• ಬಸ್ ತಂಗುದಾಣಗಳ ನಿರ್ಮಾಣ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...