ಎಟಿಎಂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Date:

  • ಬ್ಯಾಟರಿಗಳನ್ನು ₹1,000 ರಿಂದ ₹2,000 ವರೆಗಿನ ಮೊತ್ತಕ್ಕೆ ವಿತರಕರಿಗೆ ಮಾರಾಟ
  • ಕರ್ಣಾಟಕ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳ ಕಳ್ಳತನ

ಎಟಿಎಂ ಕಿಯೋಸ್ಕ್‌ಗಳಲ್ಲಿ ಅಳವಡಿಸಲಾಗಿದ್ದ ಪವರ್ ಬ್ಯಾಟರಿಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

- Advertisement -

ವಿನೋಭಾ ನಗರ(ಕೆಜಿ ಹಳ್ಳಿ)ದ ನಿವಾಸಿ 33 ವರ್ಷದ ರಫೀಕ್ ಪಾಷಾ ಮತ್ತು ಡಿಜೆ ಹಳ್ಳಿಯ 23 ವರ್ಷದ ಮೊಹಮ್ಮದ್ ಮುಬಾರಕ್ ಇಬ್ಬರು ಬಂಧಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಂಧಿತರು ಹಗಲಿನಲ್ಲಿ ಭದ್ರತಾ ಸಿಬ್ಬಂದಿ ಇಲ್ಲದ ಎಟಿಎಂ ಬೂತ್‌ಗಳನ್ನು ಗುರಿಯಾಗಿಸಿ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಾರೆ. ಮೇ 1ರಂದು ಯಲಹಂಕ ಸಮೀಪದ ಮಾರುತಿನಗರದಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳನ್ನು ರಫೀಕ್ ಪಾಷಾ ಮತ್ತು ಅವನ ಸಹಚರ ಮೊಹಮ್ಮದ್ ಮುಬಾರಕ್ ಕಳವು ಮಾಡಿದ್ದರು.

ಕಿಯೋಸ್ಕ್ ಅನ್ನು ನಿರ್ವಹಿಸುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಚಂದ್ರಕಾಂತ ಹೂಗಾರ ಮೇ 3ರಂದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆ, ಮೇ 4 ರಂದು ಪೊಲೀಸ್ ಇನ್ಸ್‌ಪೆಕ್ಟರ್ ವಿ ಬಾಲಾಜಿ ನೇತೃತ್ವದ ಗುಂಪು ಅವರನ್ನು ಬಂಧಿಸಿ ಅವರಿಂದ ಆರು ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದರು.

ವಿಚಾರಣೆ ವೇಳೆ, ಬಂಧಿತರು ತಾವು ಮಾರುತಿ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕಿಯೋಸ್ಕ್‌ನಿಂದ ಮೂರು ಬ್ಯಾಟರಿಗಳನ್ನು ಕದ್ದಿರುವುದಾಗಿ ಇಬ್ಬರೂ ಒಪ್ಪಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತಗಟ್ಟೆಯಲ್ಲೆ ಕುಳಿತು ಕರಪತ್ರ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರು: ಎಎಪಿ ಆರೋಪ

ಮೇ 4 ರಂದು ಎಸ್‌ಬಿಐಗಾಗಿ ಎಟಿಎಂಗಳನ್ನು ನಿರ್ವಹಿಸುವ ಮತ್ತೊಂದು ಸಂಸ್ಥೆಗೆ ಪೊಲೀಸರು ಎಚ್ಚರಿಸಿದ್ದಾರೆ. ಸಂಸ್ಥೆಯ ಉದ್ಯೋಗಿ ಉಮಾ ಮಹೇಶ ಅವರು ನೀಡಿದ ದೂರಿನ ಆಧಾರದ ಮೇಲೆ ಅವರು ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ.

ಬ್ಯಾಟರಿಗಳನ್ನು ಸ್ಕ್ರ್ಯಾಪ್ ಅಥವಾ ಬ್ಯಾಟರಿ ವಿತರಕರಿಗೆ ₹1,000 ರಿಂದ ₹2,000 ವರೆಗಿನ ಮೊತ್ತಕ್ಕೆ ಮಾರಾಟ ಮಾಡುತ್ತಾರೆ. ಬಂಧಿತ ಇಬ್ಬರು ವ್ಯಕ್ತಿಗಳು ಈ ಹಿಂದೆಯೂ ಬಂಧಿತರಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...