ಬೆಂಗಳೂರು | ಅನಿಲ ಸೋರಿಕೆಯಿಂದ ಹೊತ್ತಿ ಉರಿದ ಮನೆ: ಇಬ್ಬರು ಸಜೀವ ದಹನ

Date:

Advertisements

ಎಲ್‌ಪಿಜಿ ಅನಿಲ ಸೋರಿಕೆಯಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನವಾದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳು. ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಅವಘಡ ಸಂಭವಿಸಿದೆ.

ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆ ಇವೆ. ಎರಡರಲ್ಲಿ ಒಂದು ಮನೆಯನ್ನು ನಾಗರಾಜ್ ಬಾಡಿಗೆಗೆ ಪಡೆದಿದ್ದರು. ಮೂಲತಃ ಬಳ್ಳಾರಿಯವರಾಗಿದ್ದ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿತ್ತು. ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್ ಗೌಡ (18) ವಾಸವಾಗಿದ್ದರು. ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ನಾಗರಾಜ್ ದೇವರಿಗೆ ದೀಪ ಹಚ್ಚಿದ್ದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆಗಳು ನಿಲ್ಲಬೇಕಿದ್ದರೆ ಜಾತಿವಿನಾಶ ಆಗಲೇಬೇಕು

ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಎರಡನೇ ಮಗ ಅಭಿಷೇಕ್ ಮುಂದಾಗಿದ್ದರು. ಈ ವೇಳೆ ಸಿಲಿಂಡರ್‌ನಿಂದ ಗ್ಯಾಸ್ ಲೀಕ್ ಆಗಿದ್ದು, ದೀಪದ ಬೆಂಕಿ ತಗುಲಿದೆ. ಮನೆ ಹೊತ್ತಿ ಉರಿದಿದ್ದು ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್‌ಗೂ ಬೆಂಕಿ ಅವಘಡಕ್ಕೆ ಸಿಲುಕಿದ್ದರು. ಕೂಡಲೇ ಎಲ್ಲರನ್ನೂ ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಹಾಗೂ ಬಸವ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X