ಬೆಂಗಳೂರು | ವಂದೇ ಭಾರತ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

Date:

ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

- Advertisement -

ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಮೃತರು. ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ರೈಲ್ವೇ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್​ನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಧ್ಯಮಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಟ್ಟಿಗೆದ್ದದ್ದು ಏಕೆ?

ಭಾನುವಾರ ಸಂಜೆ ಚಿಕ್ಕಬಾಣಾವರ ನಿಲ್ದಾಣದ ಬಳಿ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿದ್ದಾರೆ. ಪರಿಣಾಮ ಇಬ್ಬರೂ ಸಹ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಘಟನೆ ಸಂಬಂಧ ರಾಜ್ಯ ರೈಲ್ವೆ ಎಸ್​​ಪಿ ಯತೀಶ್ ಎನ್, ”ಮೃತರಿಬ್ಬರು ಸ್ನೇಹಿತರಾಗಿದ್ದು, ರೈಲಿನ ಸಿಸಿಟಿವಿ ಪರಿಶೀಲಿಸಿದಾಗ ಮೇಲ್ನೋಟಕ್ಕೆ ಇಬ್ಬರೂ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಕಂಡು ಬಂದಿದೆ. ಸದ್ಯದ ತನಿಖೆಯಲ್ಲಿ ಯಾವುದೇ ರೀತಿಯ ಡೆತ್ ನೋಟ್ ದೊರೆತಿಲ್ಲ. ಗ್ರಾಮಾಂತರ ರೈಲ್ವೆ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಯ ಕಾರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

image 76
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...