ಪಾದಚಾರಿ ಹಾಗೂ ಬೈಕ್ ಸವಾರನ ಮೇಲೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಓಲ್ಡ್ ಏರ್ಫೋರ್ಟ್ ರಸ್ತೆಯ ಮುರುಗೇಶ್ ಪಾಳ್ಯ ಬಳಿ ಬುಧವಾರ ತಡರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪಾದಚಾರಿ ಹಾಗೂ ಚಲಾಯಿಸುತ್ತಿದ್ದ ಬೈಕ್ ಸವಾರನಿಗೆ ಬಸ್ ಡಿಕ್ಕಿ ಹೊಡೆದ ಕಾರಣದಿಂದ ಅಪಘಾತ ಸಂಭವಿಸಿದೆ. ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದು, ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರಲ್ಲಿ ಓರ್ವ ಪಾದಚಾರಿ ಹಾಗೂ ಇನ್ನೊಬ್ಬ ಇ-ಕಾಮರ್ಸ್ ಬೈಕ್ ಸವಾರ ಎನ್ನಲಾಗಿದೆ. ಸಿಗ್ನಲ್ನಲ್ಲಿ ಬೈಕ್ ಯೂಟರ್ನ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಬೈಕ್ ಸವಾರ ಹಾಗೂ ಅದೇ ರಸ್ತೆಯಲ್ಲಿ ಡಿವೈಡರ್ ಕ್ರಾಸ್ ಮಾಡಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತ ಪಾದಚಾರಿ ಜಿಮ್ಮರ್ ಆಗಿದ್ದು ಜಿಮ್ ಮುಗಿಸಿ ಬರುವಾಗ ಅಪಘಾತವುಂಟಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಂಗ್ಯ ವಿನೋದಗಳ ಮೇಲೆ ಬುಲ್ಡೋಝರ್ ಹರಿಸುವ ಊಸರವಳ್ಳಿಗಳು!
ಅಪಘಾತದ ನಂತರ ಹೆಚ್ಎಎಲ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಜೆ.ಬಿ.ನಗರ ಸಂಚಾರ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಗೆ ಬಿಎಂಟಿಸಿ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಶಂಕಿಸಲಾಗಿದೆ. ಓಲ್ಡ್ ಏರ್ಫೋರ್ಟ್ ರಸ್ತೆ ಸದಾ ಗಿಜಿಗುಡುವ ರಸ್ತೆಯಾಗಿದ್ದು ಆಗಾಗ ಅಪಘಾತ ಸಂಭವಿಸುತ್ತಿರುತ್ತದೆ.