ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

Date:

ಪಾದಚಾರಿ ಹಾಗೂ ಬೈಕ್‌ ಸವಾರನ ಮೇಲೆ ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಓಲ್ಡ್ ಏರ್​ಫೋರ್ಟ್ ರಸ್ತೆಯ ಮುರುಗೇಶ್ ಪಾಳ್ಯ ಬಳಿ ಬುಧವಾರ ತಡರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

- Advertisement -

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪಾದಚಾರಿ ಹಾಗೂ ಚಲಾಯಿಸುತ್ತಿದ್ದ ಬೈಕ್ ಸವಾರನಿಗೆ ಬಸ್‌ ಡಿಕ್ಕಿ ಹೊಡೆದ ಕಾರಣದಿಂದ ಅಪಘಾತ ಸಂಭವಿಸಿದೆ. ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದು, ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮೃತರಲ್ಲಿ ಓರ್ವ ಪಾದಚಾರಿ ಹಾಗೂ ಇನ್ನೊಬ್ಬ ಇ-ಕಾಮರ್ಸ್ ಬೈಕ್ ಸವಾರ ಎನ್ನಲಾಗಿದೆ. ಸಿಗ್ನಲ್​​ನಲ್ಲಿ ಬೈಕ್ ಯೂಟರ್ನ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಬೈಕ್ ಸವಾರ ಹಾಗೂ ಅದೇ ರಸ್ತೆಯಲ್ಲಿ ಡಿವೈಡರ್ ಕ್ರಾಸ್ ಮಾಡಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತ ಪಾದಚಾರಿ ಜಿಮ್ಮರ್ ಆಗಿದ್ದು ಜಿಮ್ ಮುಗಿಸಿ ಬರುವಾಗ ಅಪಘಾತವುಂಟಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಂಗ್ಯ ವಿನೋದಗಳ ಮೇಲೆ ಬುಲ್ಡೋಝರ್ ಹರಿಸುವ ಊಸರವಳ್ಳಿಗಳು!

ಅಪಘಾತದ ನಂತರ ಹೆಚ್​​ಎಎಲ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಜೆ.ಬಿ.ನಗರ ಸಂಚಾರ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಗೆ ಬಿಎಂಟಿಸಿ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಶಂಕಿಸಲಾಗಿದೆ. ಓಲ್ಡ್ ಏರ್​​ಫೋರ್ಟ್ ರಸ್ತೆ ಸದಾ ಗಿಜಿಗುಡುವ ರಸ್ತೆಯಾಗಿದ್ದು ಆಗಾಗ ಅಪಘಾತ ಸಂಭವಿಸುತ್ತಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...