ಬೆಂಗಳೂರು | ‘ಮಚ್ಚಾ’ ಎಂದಿದ್ದಕ್ಕೆ ಚಾಕು ಇರಿತ

Date:

ದಾರಿಯಲ್ಲಿ ಹೋಗುತ್ತಿದ್ದಾಗ ಮಚ್ಚಾ ಎಂದು ಕರೆದಿದ್ದಕ್ಕೆ ಸ್ವಂತ ಮಚ್ಚಾನನ್ನು(ಬಾಮೈದ) ಕರೆತಂದು ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ.

- Advertisement -

ಕೀರ್ತಿ ಕುಮಾರ್ ಹಲ್ಲೆಗೊಳಗಾದ ಯುವಕ. ಸುನೀಲ್ ಹಾಗೂ ಗಣೇಶ್ ಹಲ್ಲೆ ಮಾಡಿದ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಾ. 14ರಂದು ರಾತ್ರಿ ಈ ಘಟನೆ ನಡೆದಿದ್ದು, ಕೀರ್ತಿ ಕುಮಾರ್ ಎಂಬಾತನಿಗೆ ಸುನೀಲ್, ಗಣೇಶ್‌ ಎಂಬುವವರು ಚಾಕು ಇರಿದಿದ್ದರು. ಮಧು, ಮಹೇಶ್ ಎಂಬುವವರು ವೈನ್ ಸ್ಟೋರ್‌ನಲ್ಲಿ ಗಲಾಟೆ ಮಾಡಿಕೊಂಡಿದ್ದರು. ಮಧು ಹಾಗೂ ಮಹೇಶ್ ಇಬ್ಬರೂ ಕೀರ್ತಿ ಕುಮಾರ್‌ನ ಸ್ನೇಹಿತರಾಗಿದ್ದರು. ಇಬ್ಬರ ಗಲಾಟೆಯನ್ನು ರಾಜಿ ಮಾಡಿಸಲು ಭೀಮೇಶ್ ಬಳಿ ಕೀರ್ತಿ ಕುಮಾರ್ ಕರೆದುಕೊಂಡು ಹೋಗಿದ್ದನು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಬಿಜೆಪಿ ವಿರೋಧವೇ ಅಸಾಂವಿಧಾನಿಕ

ಈ ವೇಳೆ ಸುನೀಲ್ ಎಂಬಾತ ಬೈಕ್‌ನಲ್ಲಿ ಮನೆ ಕಡೆಗೆ ತೆರಳುತ್ತಿದ್ದಾಗ ಜನರ ಗುಂಪು ನೋಡಿ ಬೈಕ್ ನಿಲ್ಲಿಸಿದ್ದ. ಸುನೀಲ್‌ನನ್ನ ನೋಡಿದ್ದ ಕೀರ್ತಿ ಕುಮಾರ್, ಗಾಡಿ ಯಾಕೆ ನಿಲ್ಲಿಸಿರುವೆ ಮನೆಕಡೆ ಹೋಗೋ ʼಮಚ್ಚಾ’ ಎಂದಿದ್ದ. ನನ್ನನ್ನೇ ಮಚ್ಚಾ ಎಂದು ಕರೆಯುತ್ತೀಯಾ ಎಂದು ಸುನೀಲ್ ಕೋಪಗೊಂಡಿದ್ದ.

ಮನೆಗೆ ತೆರಳಿ ಸ್ವಂತ ಮಚ್ಚಾ (ಬಾಮೈದ) ಗಣೇಶ್‌ನನ್ನ ಕರೆದುಕೊಂಡು ಬಂದಿದ್ದ. ಬಳಿಕ ಇಬ್ಬರು ಸೇರಿ ಕೀರ್ತಿ ಕುಮಾರ್‌ಗೆ ಚಾಕುವಿನಿಂದ ಇರಿದಿದ್ದರು ಎನ್ನಲಾಗಿದೆ.

ಘಟನೆಯ ಆರೋಪಿಗಳಾದ ಸುನೀಲ್ ಹಾಗೂ ಗಣೇಶ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...