ಉಡುಪಿ | ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು

Date:

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿ ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿರುವ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ಬ್ರಹ್ಮಾವರ ತಾಲ್ಲೂಕಿನ ಕೋಟ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.

- Advertisement -

ಸುದಿನ ಎಂಬುವವರು ದೂರು ನೀಡಿದ ವ್ಯಕ್ತಿ. ಇವರು ಮೂಲತಃ ಬ್ರಹ್ಮಾವರ ತಾಲೂಕು ಕೋಡಿ ನಿವಾಸಿ. ಇವರು ಮೀನು ವ್ಯಾಪಾರವನ್ನು ನಡೆಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆರೋಪಿ ಚೈತ್ರಾ ಕುಂದಾಪುರ ಸುದಿನ ಅವರಿಂದ ₹5 ಲಕ್ಷ ಪಡೆದು ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿದ್ದಾರೆ. ಬಳಿಕ ಬಟ್ಟೆ ಅಂಗಡಿಯನ್ನು ಹಾಕಿಕೊಡದೆ, ಹಣವನ್ನು ಹಿಂತಿರುಗಿಸದೆ ಜೀವ ಬೆದರಿಕೆ ಹಾಕಿ ವಂಚಿಸಿದ್ದಾರೆ ಎಂದು ದೂರಲಾಗಿದೆ.

ದೂರು ನೀಡಿದ ಸುದಿನ

ಸುದಿನ ಎಂಬವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ, ಸುಮಾರು ಐದು ಲಕ್ಷ ರೂ. ಪಡೆದು ಬಟ್ಟೆ ಅಂಗಡಿಯನ್ನು ಹಾಕಿ ಕೊಡದೆ ಹಣವನ್ನು ಮರಳಿಸದೆ, ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.

ಸುದಿನ ಎಂಬುವವರಿಗೆ 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸುದಿನ ಅವರು ಕೂಡ ಬಿಜೆಪಿ ಕಾರ್ಯಕರ್ತ ಎಂದು ತಿಳಿದುಬಂದಿದೆ. ಚೈತ್ರಾ ಸುದಿನ ಬಳಿ ತಾನು ಬಿಜೆಪಿ ಪಕ್ಷದ ಉನ್ನತ ಸ್ಥಾನದಲ್ಲಿದ್ದೇನೆ. ನನಗೆ ಹಲವು ಮಂತ್ರಿಗಳು, ಸಚಿವರು ಹಾಗೂ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೊಂಡಿದ್ದಳು.

“ಚೈತ್ರಾ ಕುಂದಾಪುರ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ಸುದಿನಗೆ ತಿಳಿಸಿದ್ದಳು. ನಂತರ 2018 ರಿಂದ 2023ರವರೆಗೆ ಪದೇಪದೆ ಕರೆ ಮಾಡಿ ಸುದಿನ ಅವರಿಂದ ಸುಮಾರು ₹5 ಲಕ್ಷ ಪಡೆದಿದ್ದಾಳೆ. ಈ ಹಣವನ್ನು ಸುದಿನ ಅವರು ತಮ್ಮ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಸುಮಾರು ₹3 ಲಕ್ಷ ಹಣವನ್ನು ಚೈತ್ರಾಳಿಗೆ ವರ್ಗಾವಣೆ ಮಾಡಿದ್ದು, ಇನ್ನುಳಿದ ₹2 ಲಕ್ಷ ಹಣವನ್ನು ನಗದು ರೂಪದಲ್ಲಿ 2023ರ ವರೆಗೆ ಚೈತ್ರಾಳಿಗೆ ನೀಡಿದ್ದೇನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಅಂಗಡಿ ಬಗ್ಗೆ ಚೈತ್ರಾಳ ಬಳಿ ಕೇಳಿದಾಗ ಪ್ರತಿ ಬಾರಿಯೂ ಸ್ಥಳೀಯ ಮುಖಂಡರಲ್ಲಿ ಮಾತುಕತೆ ನಡೆದಿದೆ. ಅಂತಿಮ ಹಂತದಲ್ಲಿದೆ ಎಂದು ಹೇಳಿ ನಂಬಿಸಿದ್ದಳು. ಬಳಿಕ ಚೈತ್ರಾ ಚುನಾವಣಾ ಪ್ರಚಾರ, ನಾನಾ ಕಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವೆಲ್ಲವನ್ನು ನೆಪವಾಗಿ ಮುಂದಿಟ್ಟು, ದಿನಗಳನ್ನು ಮುಂದೂಡುತ್ತಾ ಬಂದರು. ಮತ್ತೆ ಇನ್ನಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 553 ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ

ಇಷ್ಟು ದಿನ ಕಳೆದರೂ ಚೈತ್ರಾ ಅಂಗಡಿ ಹಾಕಿಸಿ ಕೊಡಲಿಲ್ಲ. ಇದರಿಂದ ಅವರ ಮೇಲೆ ಅನುಮಾನಗೊಂಡು ನನಗೆ ಬಟ್ಟೆ ಅಂಗಡಿ ಹಾಕಿಸಿಕೊಡುವಂತೆ ಕೇಳಿದೆ. ಅಂಗಡಿ ಹಾಕಿಕೊಡದಿದ್ದರೆ, ನೀಡಿದ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದೆ. ಆದರೆ, ಚೈತ್ರಾ ಅವರು ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ, ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದರು. ಕೆಲವು ದಿನಗಳ ಹಿಂದೆ ಚೈತ್ರಾ ಇನ್ನಷ್ಟು ಜನರಿಗೆ ವಂಚನೆ ಮಾಡಿದ ಬಗ್ಗೆ ಮಾಧ್ಯಮದಲ್ಲಿ ನೋಡಿದೆ. ಚೈತ್ರಾ ನನಗೂ ಕೂಡ ಮೋಸ ಮಾಡಿ, ಹಣವನ್ನು ಲಪಟಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...