ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಹಸಿರು ಪಟಾಕಿ ಬಳಸಿ: ಪೊಲೀಸ್ ಆಯುಕ್ತ ದಯಾನಂದ

Date:

ದೀಪಾವಳಿ ಹಬ್ಬದ ಸಂಭ್ರಮಾಚರಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಹಬ್ಬದ ಸಂದರ್ಭದಲ್ಲಿ ಪಟಾಕಿ ಹಚ್ಚುವುದರಲ್ಲಿ ಮಕ್ಕಳು ಮತ್ತು ನಾಗರಿಕರು ಎಚ್ಚರಿಕೆ ವಹಿಸಬೇಕು. ಸುಪ್ರೀಂ ಕೋರ್ಟ್‌ ಆದೇಶದಂತೆ ನಗರದಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಲು ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದರು.

- Advertisement -

ಈ ಬಗ್ಗೆ ನ.10 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಜನರು ಪರಿಸರ ಸ್ನೇಹಿ ದೀಪಾವಳಿ ಆಚರಣೆ ಮಾಡಬೇಕು. ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡಬೇಕು. ನಗರದಕ್ಕೆ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ತರದಂತೆ ಚೆಕ್​​ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಹಸಿರು ಪಟಾಕಿಗಳ ಮೇಲೆ ಕ್ಯೂ ಆರ್ ಕೋಡ್ ಇರತ್ತೆ ಅದನ್ನು ಸ್ಲ್ಯಾನ್ ಮಾಡುವ ಮೂಲಕ ಸಾರ್ವಜನಿಕರು ಹಸಿರು ಪಟಾಕಿಯನ್ನು ಪತ್ತೆ ಮಾಡಿ ಬಳಸಬೇಕು. ನಗರದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೂ ಮಾತ್ರ ಪಟಾಕಿ ಸಿಡಿಸಬೇಕು. ಅನಧಿಕೃತವಾಗಿ ಪಟಾಕಿ ಮಾರಾಟ ಮಾಡಿದರೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುವವರನ್ನು ಪತ್ತೆ ಹಚ್ಚಲು ಪೊಲೀಸ್, ಅಗ್ನಿಶಾಮಕ, ಬಿಬಿಎಂಪಿ ಸಹಯೋಗದಲ್ಲಿ ಟಾಸ್ಕ್​ಫೋರ್ಸ್​ ರಚಿಸಲಾಗಿದೆ” ಎಂದು ತಿಳಿಸಿದರು.

“ಇನ್ನು ಅಗ್ನಿಶಾಮಕ ಇಲಾಖೆ ಮೂಲಕ ಮಾಹಿತಿ ಪಡೆದು ಪಟಾಕಿ ಮಾರಾಟಕ್ಕೆ ಲೈಸೆನ್ಸ್​ ನೀಡಲಾಗಿದೆ. ಬಿಬಿಎಂಪಿ ನಗರದಲ್ಲಿ ಎಲ್ಲೆಲ್ಲಿ ಪಟಾಕಿ ಮಳಿಗೆ ನಿರ್ಮಾಣ ಮಾಡಬೇಕು ಎಂದು ಬಿಬಿಎಂಪಿ ನಿರ್ಧರಿಸಲಿದೆ. ಮಳಿಗೆಗಳನ್ನು ಹಾಕಲು ಅನುಮತಿ ನೀಡಲಿದೆ. ಈಗಾಗಲೇ ಬೆಂಗಳೂರಿನ 62 ಮೈದಾನದಲ್ಲಿ ಮಳಿಗೆ ಹಾಕಲು ಅನುಮತಿ ನೀಡಲಾಗಿದೆ. 964 ಜನರು ಪಟಾಕಿ ಮಾರಾಟದ ಲೈಸೆನ್ಸ್​ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ. ಈ ಪೈಕಿ 263 ಜನರಿಗೆ ಲಾಟರಿ ಮೂಲಕ ಲೈಸೆನ್ಸ್ ನೀಡಲಾಗಿದೆ” ಎಂದರು.

ಟ್ವೀಟ್ ಮೂಲಕ ಪಟಾಕಿ ಸಲಹೆ ನೀಡುತ್ತಿರುವ ಪೊಲೀಸ್ ಇಲಾಖೆ

ನಮ್ಮ ದೀಪಾವಳಿ ಪಟಾಕಿ ಸುರಕ್ಷತಾ ಅಭಿಯಾನಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆ ತನ್ನ ಎಕ್ಸ್‌ನಲ್ಲಿ ದಿನಕ್ಕೊಂದು ಸುರಕ್ಷತಾ ಸಲಹೆಗಳನ್ನು ನೀಡುತ್ತಿದೆ. ಅವು ಇಲ್ಲಿವೆ.

  • ದೀಪಾವಳಿಯನ್ನು ಬಾಳಿಗೆ ಬೆಳಕಾಗುವಂತೆ ಆಚರಿಸಿ, ಬಾಳನ್ನು ಆರಿಸುವ ಬೆಂಕಿಯಂತೆ ಅಲ್ಲ! ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ತಯಾರಿಸಿದ ಪಟಾಕಿಗಳನ್ನು ಆಯ್ಕೆಮಾಡಿ. ಜವಾಬ್ದಾರಿಯುತವಾಗಿ ಹಬ್ಬಗಳನ್ನು ಆಚರಿಸೋಣ!
  • ಯಾವುದೇ ತೊಂದರೆಗಳಿಗೆ ಒಳಗಾಗದೆ ಪಟಾಕಿಯನ್ನು ಸಿಡಿಸಲು, ಪಟಾಕಿಯ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಸೂಚನೆಗಳನ್ನು ಪಾಲಿಸಿ. ಯಾವುದೇ ವಿಷಯದ ಕುರಿತ ಸ್ಪಷ್ಟವಾದ ಜ್ಞಾನವು ನಿಮ್ಮ ರಕ್ಷಣೆಗೆ ರಕ್ಷಾ ಕವಚದಂತೆ ಕೆಲಸ ಮಾಡುತ್ತದೆ.
  • ಬೆಳಕಿನ ಹಬ್ಬ ದೀಪಾವಳಿಯಲ್ಲಿ ಸುರಕ್ಷಿತವಾಗಿ ಬೆಳಕನ್ನು ಬೆಳಗಿಸೋಣ!, ಪಟಾಕಿ ಸಿಡಿಸುವ ಸಮಯದಲ್ಲಿ, ಪೋಷಕರ ಗಮನ ಮಕ್ಕಳ ಮೇಲೆ ಸದಾ ಇರಲಿ.
  • ಪಟಾಕಿಗಳನ್ನು ಹಚ್ಚಲು ಯಾವಾಗಲೂ ಕ್ಯಾಂಡಲ್ ಅಥವಾ ಅಗರಬತ್ತಿಗಳನ್ನು ಬಳಸಿ. ಈ ಸರಳ ಮುನ್ನೆಚ್ಚರಿಕೆಯ ಕ್ರಮವು ಸಂಭವಿಸಬಹುದಾದ ಅಪಘಾತಗಳನ್ನು ತಡೆಯುತ್ತದೆ ಅಲ್ಲದೇ ನಿಮ್ಮ ಸಂಭ್ರಮಾಚರಣೆಗಳನ್ನು ಸುರಕ್ಷಿತವಾಗಿಡುತ್ತದೆ. ದೀಪಾವಳಿ ಹಬ್ಬವನ್ನು ಜವಾಬ್ದಾರಿಯಿಂದ ಆಚರಿಸುತ್ತಾ ಸಂತಸವನ್ನು ಸವಿಯೋಣ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....