ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಡ್ರೋನ್ ಕ್ಯಾಮರಾ ಬಳಕೆ : ಗೃಹ ಸಚಿವ ಜಿ ಪರಮೇಶ್ವರ್

Date:

  • 3 ತಿಂಗಳಲ್ಲಿ ಬೆಂಗಳೂರನ್ನು ಸಂಚಾರ ಸಮಸ್ಯೆ ಮುಕ್ತವಾಗಿಸುವ ಗುರಿ
  • ನಗರದಲ್ಲಿ 7000ಕ್ಕೂ ಹೆಚ್ಚು ಕಡೆ ಕ್ಯಾಮರಾ ಅಳವಡಿಕೆಗೆ ಯೋಜನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಮೊದಲ ಬಾರಿಗೆ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಡ್ರೋನ್‌ ಕ್ಯಾಮೆರಾಗಳನ್ನು ಬಳಸಿ ಟ್ರಾಫಿಕ್ ನಿಯಂತ್ರಿಸಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ.

- Advertisement -

ಶುಕ್ರವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜತೆಗೆ ಪರಿಶೀಲನೆ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಗರದ ಸಂಚಾರ ಪೊಲೀಸರಿಗೆ ಇನ್ನೂ ಮೂರು ತಿಂಗಳಲ್ಲಿ ಬೆಂಗಳೂರನ್ನು ಸಂಚಾರ ಸಮಸ್ಯೆ ಮುಕ್ತವಾಗಿಸುವ ಗುರಿ ನೀಡಲಾಗಿದೆ. ವಿಶ್ವದಲ್ಲಿ ಬೆಂಗಳೂರು ನಗರ ಅತ್ಯಂತ ಜನದಟ್ಟಣೆಯ ನಗರಗಳಲ್ಲಿ ಒಂದಾಗಿದೆ ಎಂದು ಅಪಖ್ಯಾತಿಯನ್ನು ಪಡೆದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಈಗ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾದರೆ ಅದಕ್ಕೆ ನಿಖರ ಕಾರಣ ಪತ್ತೆಗೆ ಪೊಲೀಸರಿಗೆ ಅಡಚಣೆಯಾಗುತ್ತಿದೆ. ಹಾಗಾಗಿ, ನಗರದಲ್ಲಿ ಇನ್ನುಮುಂದೆ ವಾಹನ ಸಂಚಾರ ದಟ್ಟಣೆಯನ್ನು ತಗ್ಗಿಸಲು ಡ್ರೋನ್ ಕ್ಯಾಮರಾ ಬಳಸಿ ಸಂಚಾರ ನಿರ್ವಹಣೆ ಮಾಡಲಾಗುತ್ತದೆ” ಎಂದು ತಿಳಿಸಿದರು.

“ಈ ಡ್ರೋನ್ ಕ್ಯಾಮರಾಗಳು ಪೊಲೀಸ್‌ ನಿಯಂತ್ರಣ ಕೊಠಡಿಗೆ ಸಂಪರ್ಕ ಹೊಂದಿರುತ್ತವೆ. ಸಂಚಾರ ದಟ್ಟಣೆ ಉಂಟಾದ ಸ್ಥಳಗಳಿಂದಲೇ ಇನ್‌ಸ್ಪೆಕ್ಟರ್ ವಾಹನದಲ್ಲಿ ಆ ಕ್ಯಾಮರಾಗಳ ನಿರ್ವಹಿಸುವ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಎಲ್ಲಿ ವಾಹನ ಓಡಾಡಕ್ಕೆ ಅಡ್ಡಿಯಾಗಿರುತ್ತದೆಯೋ ಕೂಡಲೇ ಡ್ರೋನ್‌ ಬಳಸಿ ಯಾವ ಜಾಗದಲ್ಲಿ ಸಂಚಾರ ದಟ್ಟಣೆಯಾಗಿದೆ ಎಂಬುದನ್ನು ಪತ್ತೆ ಮಾಡಬಹುದು” ಎಂದರು.

“ನಗರದಲ್ಲಿ ಪ್ರತಿ ದಿನ ಬೆಳಿಗ್ಗೆ ಹಾಗೂ ಸಾಯಂಕಾಲ್ ಪೀಕ್ ಅವರ್‌ನಲ್ಲಿ ಎರಡು ಗಂಟೆಗಳ ಕಾಲ ಸಂಚಾರ ಪೊಲೀಸರು ರಸ್ತೆಯಲ್ಲಿ ನಿಂತು ಸಂಚಾರ ನಿರ್ವಹಣೆ ಮಾಡಬೇಕು. ಒಂದು ವೇಳೆ ದಟ್ಟಣೆ ಉಂಟಾದರೇ ಇದಕ್ಕೆ ಡಿಸಿಪಿ ಮತ್ತು ಎಸಿಪಿ ಅವರನ್ನು ಹೊಣೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

“ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ನಗರದ ಜನಬಿಡದ ಪ್ರದೇಶ ಹಾಗೂ ಮಹಿಳೆಯರು ಹೆಚ್ಚೆಚ್ಚು ಓಡಾಟ ನಡೆಸುವ ಕಡೆಗಳಲ್ಲಿ ಹೈ ರೆಸಲ್ಯೂಷನ್ ಸಿಸಿಟಿವಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ. ನಗರದಲ್ಲಿ 7000ಕ್ಕೂ ಹೆಚ್ಚು ಕಡೆ ಕ್ಯಾಮರಾ ಅಳವಡಿಕೆಗೆ ಯೋಜನೆ ಮಾಡಲಾಗಿದೆ. ಸೇಫ್‌ ಸಿಟಿ ಪ್ರಾಜೆಕ್ಟ್ 70% ಮುಗ್ದಿದ್ದು ಉಳಿದ ಕೆಲಸಗಳು ನಡಿಯುತ್ತಿವೆ. ಇನ್ನೂ ಹೊಯ್ಸಳ ಸಿಬ್ಬಂದಿಗೆ ಬಾಡಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಇದರಿಂದ ಅವರ ಪ್ರತಿ ಸಂಭಾಷಣೆ, ಜನರ ಸಂಭಾಷಣೆ ರೆಕಾರ್ಡ್ ಆಗುತ್ತದೆ” ಎಂದು ಸಚಿವ ಪರಮೇಶ್ವರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಒಂದು ವರ್ಷದ ಅವಧಿಯವರೆಗೆ ವಿದ್ಯುತ್ ದರ ಹೆಚ್ಚಳ ಮುಂದೂಡಲು ಹೋಟೆಲ್ ಸಂಘ ಮನವಿ

“ಸಂಚಾರ ವಿಭಾಗದ ನಾಲ್ಕು ಡಿಸಿಪಿಗಳಿಗೆ ನಾಲ್ಕು ಡ್ರೋನ್ ಕ್ಯಾಮೆರಾಗಳನ್ನು ಖರೀದಿಸಲಾಗಿದೆ. ಇನ್ನು 10 ದಿನಗಳಲ್ಲಿ ಕ್ಯಾಮೆರಾ ಪಡೆಯಲಾಗುವುದು. ಡ್ರೋನ್ ಕ್ಯಾಮರಾ ಬಳಕೆಯ ಬಗ್ಗೆ ತರಬೇತಿ ನಡೆಯುತ್ತಿದೆ. 10 ಸಂಚಾರ ಉಪವಿಭಾಗಗಳ ಎಲ್ಲ ಎಸಿಪಿಗಳು ಮತ್ತು ಸಂಚಾರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಹಂತ ಹಂತವಾಗಿ ಡ್ರೋನ್‌ಗಳನ್ನು ಪಡೆಯಲಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...