ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದು, ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ 26 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.
ವಾರ್ಡ್‌ನಲ್ಲಿ 14 ಪುರುಷರು, 5 ಮಹಿಳೆಯರು ಹಾಗೂ 7 ಮಕ್ಕಳು ಇದ್ದು, ಐಸಿಯುನಲ್ಲಿ 5 ರೋಗಿಗಳನ್ನು ದಾಖಲಿಸಲಾಗಿತ್ತು. ಭಾರಿ ಹೊಗೆಯ ಕಾರಣದಿಂದ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ, 26 ರೋಗಿಗಳನ್ನು ವಿಕ್ಟೋರಿಯಾ ಆಸ್ಪತ್ರೆಯ ಎಚ್ ಬ್ಲಾಕ್‌ಗೆ ಸ್ಥಳಾಂತರಿಸಲಾಗಿದೆ. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ವೈದ್ಯಕೀಯ ಚಿಕಿತ್ಸೆಯನ್ನು ಮುಂದುವರೆಸಲಾಗಿದೆ.
ಸ್ವಿಚ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳ ತಕ್ಷಣ ಕಾರ್ಯಪ್ರವೃತ್ತರಾಗಿದ್ದರಿಂದ ಕೂಡಲೇ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
