ವಿಧಾನಸೌಧವೂ ಕೂಡಾ ಶೀಘ್ರವೇ ಪ್ರವಾಸಿ ತಾಣವಾಗಲಿದೆ. ಸಾರ್ವತ್ರಿಕ ರಜಾ ದಿನಗಳ ಸಂದರ್ಭದಲ್ಲಿ ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶ ನೀಡಲು ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಇದಕ್ಕೆ ಪ್ರವೇಶ ಶುಲ್ಕ ನಿಗದಿಪಡಿಸಲೂ ನಿರ್ಧರಿಸಿದೆ.
ಬೆಳಿಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ‘ಗೈಡೆಡ್ ಟೂರ್’ ಆರಂಭಿಸಲು ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದೆ. ವಿಧಾನಸೌಧ ನೋಡಲು ಬರುವ ಪ್ರವಾಸಿಗರಿಗೆ, ಸಾರ್ವಜನಿಕರಿಗೆ ಶುಲ್ಕವನ್ನು ವಿಧಿಸಲಾಗುತ್ತದೆ. ಆನ್‌ಲೈನ್ ಮೂಲಕವೂ ಟಿಕೆಟ್ ಪಡೆಯಬಹುದಾಗಿದೆ. ಶುಲ್ಕವೆಷ್ಟು ಎಂಬುದು ಇನ್ನೂ ನಿಗದಿಯಾಗಿಲ್ಲ.
ಇದನ್ನು ಓದಿದ್ದೀರಾ? ಪ್ರವಾಸಿಗರೇ ಗಮನಿಸಿ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗಿಲ್ಲ ಪ್ರವೇಶ
ಪ್ರವಾಸಿಗರನ್ನು ತಲಾ 30 ಜನರ ತಂಡವನ್ನಾಗಿ ವಿಭಜಿಸಿ ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲು, ಜೊತೆಗೆ ಪ್ರತಿ ತಂಡದ ಮೇಲ್ವಿಚಾರಣೆಗೆ ಪ್ರವಾಸಿ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಿಸಲಾಗುತ್ತದೆ. ಪ್ರತಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಮ ವಿವರಗಳನ್ನು ಧಾನಸೌಧದ ಭದ್ರತಾ ವಿಭಾಗಕ್ಕೆ ಆಯಾ ದಿನವೇ ಸಲ್ಲಿಸಲು ಸೂಚಿಸಲಾಗಿದೆ.
ಆದರೆ ವಿಧಾನಸೌಧದಲ್ಲಿ ಕೆಲಸ ಕಾರ್ಯಗಳಿಗೆ ತೆರಳುವ ಸಾರ್ವಜನಕರೂ ಕೂಡಾ ಇನ್ನು ಮುಂದೆ ಟಿಕೆಟ್ ಪಡೆದು ಶುಲ್ಕ ಪಾವತಿಸಬೇಕಾಗುತ್ತದೆಯೇ ಎಂಬ ಪ್ರಶ್ನೆಯಿದೆ. ವಿಧಾನಸೌಧ ವೀಕ್ಷಣೆಗೆ ಬಂದವರನ್ನುಮತ್ತು ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಬಂದವರನ್ನ ಹೇಗೆ ವಿಂಗಡಿಸಲಾಗುತ್ತದೆ ಎಂಬ ಗೊಂದಲವೂ ಇದೆ.
ಕೆಲವು ನಿಯಮಗಳನ್ನು ಕೂಡಾ ಪ್ರವಾಸಿಗರು ಕಡ್ಡಾಯವಾಗಿ ಪಾಲಿಸಬೇಕಿದೆ. ಪ್ರವಾಸಿಗರ ಅಧಿಕೃತ ಗುರುತಿನ ಚೀಟಿಯನ್ನು ಪರಿಶೀಲಿಸಿದ ನಂತರವೇ ವಿಧಾನಸೌಧ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಕಟ್ಟಡದ ಯಾವುದೇ ಭಾಗಕ್ಕೆ, ಪ್ರತಿಮೆಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ.
