ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಿ : ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

Date:

  • ವಿಧಾನಸಭೆಗೆ ಕಳುಹಿಸುವಂತ ಪ್ರತಿನಿಧಿಯ ಬಗ್ಗೆ ಮೊದಲು ನಾವೆಲ್ಲರೂ ತಿಳಿದುಕೊಳ್ಳಬೇಕು
  • ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯ ಪಥದತ್ತ ನಡೆಸಲು ರಾಜ್ಯಕ್ಕೆ ಒಳ್ಳೆಯ ಪ್ರತಿನಿಧಿ ಬೇಕು

ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ ಅಷ್ಟೇ ಪ್ರಾಮುಖ್ಯವಾಗಿದ್ದು, ಎಲ್ಲರೂ ಇರುವಂತಹ ಹಕ್ಕುಗಳ ಬಗ್ಗೆ ನಾಗರಿಕರಿಗೆ ಸರಿಯಾದ ಮಾಹಿತಿಯನ್ನು ನೀಡಿ ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ತಿಳಿಸಿದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ಭಾರತ ಚುನಾವಣಾ ಆಯೋಗ, ಮುಖ್ಯ ಚುನಾವಣಾ ಅಧಿಕಾರಿ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮುಂಭಾಗ ಶನಿವಾರ ಆಯೋಜಿದ್ದ ಬೃಹತ್ ವಾಕಥಾನ್ ಕಾರ್ಯಕ್ರಮಕ್ಕೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, “ವಿಧಾನಸಭಾ ಚುನಾವಣೆಯಿಂದ ಆಯ್ಕೆಯಾಗಿ ಬರುವಂತಹ ಪ್ರತಿನಿಧಿಗಳು ವಿಧಾನಸೌಧಕ್ಕೆ ಬಂದು, ವಿಧಾನಸಭಾ ಕಾರ್ಯಕಲಾಪಗಳಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಚರ್ಚಿಸುವಂತಹ ಯೋಜನೆಗಳು, ಪಾಲಿಸಿಗಳು ಕಾರ್ಯರೂಪಕ್ಕೆ ತರುವಂತಹವೆಲ್ಲವೂ ನಮ್ಮೆಲ್ಲರ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ, ವಿಧಾನಸಭೆಗೆ ಕಳುಹಿಸುವಂತ ಪ್ರತಿನಿಧಿಯ ಬಗ್ಗೆ ನಾವೆಲ್ಲರೂ ಮೊದಲು ತಿಳಿದುಕೊಂಡು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಕಾರ್ಯನಿರತರಾಗಿರುವ ವಿದ್ಯಾರ್ಥಿಗಳೆಲ್ಲರೂ ನಿಮ್ಮ-ನಿಮ್ಮ ಕ್ಷೇತಗಳಲ್ಲಿ ಎಷ್ಟು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಪಾಲ್ಗೊಂಡಿದ್ದಾರೆ. ಅವರ ಬಗ್ಗೆ ಮತದಾರರಿಗೆ ತಿಳಿದಿದೆಯೇ, ಯಾರು ಉತ್ತಮ ಅಭ್ಯರ್ಥಿ, ಮತಗಟ್ಟೆಗಳು ಎಲ್ಲಿವೆ, ಅಲ್ಲಿಗೆ ಹೇಗೆ ಹೋಗಬೇಕು ಹಾಗೂ ಏನೆಲ್ಲಾ ವ್ಯವಸ್ಥೆಯಿದೆ ಎಂಬುದರ ಬಗ್ಗೆ ನಿಮ್ಮ ಬಡಾವಣೆಯಲ್ಲಿರುವ ಮತದಾರರಿಗೆ ತಿಳಿಸುವಂತಹ ಕೆಲಸ ಮಾಡಬೇಕು” ಎಂದು ಹೇಳಿದರು.

“ನಮ್ಮ ರಾಜ್ಯಕ್ಕೆ ಒಳ್ಳೆಯ ಪ್ರತಿನಿಧಿ ಬರಬೇಕು. ಆ ಪ್ರತಿನಿಧಿ ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯ ಪಥದತ್ತ ನಡೆಸುವಂತಾಗಬೇಕು. ಅವರು ಮಾಡುವಂತಹ ಪ್ರಗತಿಗೆ ನಾವೆಲ್ಲರೂ ಸಹಕಾರ ನೀಡಬೇಕು. ಸಂವಿಧಾನದಲ್ಲಿರುವ ಮೂಲಭೂತ ವಿಷಯಗಳನ್ನು ತಿಳಿದು, ಅದರ ಬಗ್ಗೆ ನಾಗರಿಕರಿಗೆ ತಿಳಿಸುವ ಕೆಲಸ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೋದಿ ರೋಡ್‌ ಶೋ | 45 ನಿಮಿಷದ ಮೆರವಣಿಗೆಗೆ 5 ಗಂಟೆ ರಸ್ತೆಗಳು ಬಂದ್; ಬಸವಳಿದ ಬೆಂಗಳೂರು

ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಮಾತನಾಡಿ, “ನಗರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಕೈಜೋಡಿಸಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವದ ಮಹಾಹಬ್ಬದ ದಿನದಂದು ಎಲ್ಲರೂ ಬಂದು ಮತಚಲಾಯಿಸುವ ಮೂಲಕ ಮತದಾನದ ಹಬ್ಬವನ್ನು ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಈ ವೇಳೆ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್, ಬೆಂಗಳೂರು ಐಕಾನ್ ಆದ ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.                                                                                                                           

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ...

ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಬೀದರ್–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನ: ಆರಂಭಿಸುವ ಕುರಿತಂತೆ ವಿವಿಧ...

ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ)...

ಬೆಂಗಳೂರು | ‘ಸಂವಾದ’ದಿಂದ ವೃಷಭಾವತಿ ನದಿ ಉಳಿಸಿ ಆಂದೋಲನ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಜೊತೆಗೆ ನೀರಿನ ಮೂಲ ನದಿ, ಕೆರೆಗಳನ್ನು...