ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ದ್ವೇಷ ಭಾಷಣ ಮಾಡಿದ್ದಾರೆ.
ವಕ್ಫ್ ವಿರುದ್ಧವಾಗಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸ್ವಾಮೀಜಿ, “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು” ಎಂದರು.
“ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದು ಹೇಳಿದರು.
ಇದನ್ನು ಓದಿದ್ದೀರಾ? ’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’
ಇನ್ನು ಈ ಹಿಂದೆಯೂ ಚಂದ್ರಶೇಖರ ಸ್ವಾಮೀಜಿ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
The seer of Vishwa Vokkaliga Mahasamstana Math in #Karnataka sparked controversy with his call to strip the #Muslim community of voting rights. He claimed that a law similar to that in #Pakistan should be enacted, alleging non-Muslims do not have voting power there.
— Hate Detector 🔍 (@HateDetectors) November 26, 2024
Kumara… pic.twitter.com/fqA1QJ0Dd8
ಸ್ವಾಮೀಜಿಯ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಸ್ವಾಮೀಜಿಗಳೇ ಈ ರೀತಿ ಹೇಳಿಕೆಗಳನ್ನು ನೀಡಿ ನಿಮ್ಮ ಮೇಲಿರುವ ಗೌರವವನ್ನು ಕಳೆದುಕೊಳ್ಳಬೇಡಿ. ಸ್ವಾಮೀಜಿ ರಾಜಕೀಯಕ್ಕೆ ಪ್ರವೇಶಿಸಬಾರದು” ಎಂದು ನೆಟ್ಟಿಗರು ಹೇಳಿದ್ದಾರೆ.
“ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು” ಎಂದು ಉದಯ್ ಕುಮಾರ್ ಎಂಬ ನೆಟ್ಟಿಗರು ಹೇಳಿದ್ದಾರೆ. “ಇಂದು ಮುಸ್ಲಿಂಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಕೆಲವರು ಟೀಕಿಸಿದ್ದಾರೆ.

Swamiji u are shame to say indian.