ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮೀಜಿ

Date:

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ದ್ವೇಷ ಭಾಷಣ ಮಾಡಿದ್ದಾರೆ.

- Advertisement -

ವಕ್ಫ್ ವಿರುದ್ಧವಾಗಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸ್ವಾಮೀಜಿ, “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ಇನ್ನು ಈ ಹಿಂದೆಯೂ ಚಂದ್ರಶೇಖರ ಸ್ವಾಮೀಜಿ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸ್ವಾಮೀಜಿಯ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಸ್ವಾಮೀಜಿಗಳೇ ಈ ರೀತಿ ಹೇಳಿಕೆಗಳನ್ನು ನೀಡಿ ನಿಮ್ಮ ಮೇಲಿರುವ ಗೌರವವನ್ನು ಕಳೆದುಕೊಳ್ಳಬೇಡಿ. ಸ್ವಾಮೀಜಿ ರಾಜಕೀಯಕ್ಕೆ ಪ್ರವೇಶಿಸಬಾರದು” ಎಂದು ನೆಟ್ಟಿಗರು ಹೇಳಿದ್ದಾರೆ.

“ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು” ಎಂದು ಉದಯ್ ಕುಮಾರ್ ಎಂಬ ನೆಟ್ಟಿಗರು ಹೇಳಿದ್ದಾರೆ. “ಇಂದು ಮುಸ್ಲಿಂಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಕೆಲವರು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...