ಯುದ್ಧಗಳು ಕೊನೆಗಾಣಬೇಕು, ಜಾಗತಿಕ ಶಾಂತಿ ನೆಲೆಸಬೇಕು- ಎಡ ಪಕ್ಷಗಳ ಆಗ್ರಹ

Date:

ಇಡೀ ಜೀವಸಂಕುಲವನ್ನೇ ನಾಶ ಮಾಡುವಂತಹ ಯುದ್ಧಗಳು ಕೊನೆಗಾಣಬೇಕು, ಜಾಗತಿಕ ಶಾಂತಿ ನೆಲೆಸಬೇಕು ಎಂಬ ಆಶಯವನ್ನು ಪ್ರತಿಪಾದಿಸಲು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಡ ಪಕ್ಷಗಳ ನೇತೃತ್ವದಲ್ಲಿ ಯುದ್ಧ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್), ಎಸ್ ಯು ಸಿ ಐ (ಸಿ), ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ ಪಕ್ಷಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

- Advertisement -

ಜಗತ್ತಿನಲ್ಲಿ ಸರ್ವಾಧಿಕಾರಿ ಧೋರಣೆ ಮೆರೆಯುತ್ತಿರುವ ಕೆಲವು ಬಲಾಢ್ಯ ಬಂಡವಾಳಶಾಹಿ ದೇಶಗಳು ದುರ್ಬಲ ರಾಷ್ಟ್ರಗಳ ಮೇಲೆ ಅಕ್ರಮಣ ನಡೆಸಿ ತಮ್ಮ ವ್ಯಾಪಾರ ಮತ್ತು ವಾಣಿಜ್ಯ ವಹಿವಾಟಿನ ಹಿತಾಸಕ್ತಿಗಾಗಿ ಅಣ್ವಸ್ತ್ರಗಳನ್ನು ಬಳಸಿ ಸಾವು ನೋವುಗಳನ್ನು ಸೃಷ್ಟಿಸಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಪ್ಯಾಲೆಸ್ತೀನ್ ಜನರ ಮೇಲೆ ತೀವ್ರ ದಾಳಿ ನಡೆಸಿ ಮುಗ್ಧ ಅಮಾಯಕ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಸಾವಿರಾರು ಸಂಖ್ಯೆಯ ಜನಸಮೂಹವನ್ನು ಹತ್ಯೆಗೈದಿರುವ ಇಸ್ರೇಲ್ ಇದೀಗ ಇರಾನ್ ಮೇಲೆ ಯುದ್ಧ ಹೂಡಿ ಅಪಾರ ಪ್ರಮಾಣದಲ್ಲಿ ಸಾವು ನೋವುಂಟು ಮಾಡಿದೆ. ಇಂತಹ ಅಕ್ರಮಣಕಾರಿ ಯುದ್ಧಕ್ಕೆ ಅಮೆರಿಕವು ಇಸ್ರೇಲ್ ನಂತಹ ಯುದ್ಧಕೋರ ರಾಷ್ಟ್ರಗಳಿಗೆ ಸರ್ವ ರೀತಿಯ ಸಹಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಅಮಾನವೀಯ ನಿಲುವಾಗಿದೆ. ಇಂತಹ ಅಕ್ರಮ ಯುದ್ಧಗಳಿಂದ ಕೇವಲ ಒಂದೆರಡು ದೇಶಗಳಿಗೆ ಮಾತ್ರ ಕಷ್ಟ ನಷ್ಟ ಉಂಟು ಮಾಡದೆ, ಇಡೀ ಜಗತ್ತಿನ ಬೇರೆ ಬೇರೆ ದೇಶಗಳ ಮೇಲೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕತೆ, ಜನಜೀವನ ಹಾಗೂ ಪರಿಸರದ ಮೇಲೆ ಗಂಭೀರ ದುಷ್ಪರಿಣಾಮಗಳು ಬೀರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಯುದ್ಧಗಳನ್ನು ತಡೆಗಟ್ಟಲು ಹಾಗೂ ಜಾಗತಿಕ ಶಾಂತಿ ಸ್ಥಾಪಿಸುವ ಸದುದ್ದೇಶದಿಂದ ಸ್ಥಾಪಿತವಾಗಿರುವ ವಿಶ್ವಸಂಸ್ಥೆಯು ಸಹ ಇತ್ತೀಚಿನ ದಿನಮಾನಗಳಲ್ಲಿ ಯುದ್ಧಗಳನ್ನು ತಡೆಯಲು ವಿಫಲವಾಗುತ್ತಿದೆ. ಕಾರಣ ವಿಶ್ವಸಂಸ್ಥೆಯಲ್ಲಿ ಸದಸ್ಯರಾಗಿರುವ ಕೆಲವು ಸರ್ವಾಧಿಕಾರಿ ಧೋರಣೆಯ ಬಲಾಢ್ಯ ರಾಷ್ಟ್ರಗಳ ಯುದ್ಧಕೋರ ನೀತಿಯು ವಿಶ್ವಸಂಸ್ಥೆಯನ್ನು ಅಸಹಾಯಕತೆಗೆ ತಳ್ಳುತ್ತಿದೆ.

ಭಾರತವು ಸಹ ಎಂದೆಂದಿಗೂ ಯುದ್ಧ ವಿರೋಧಿ ನಿಲುವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಬಲಾಢ್ಯ ರಾಷ್ಟ್ರಗಳ ಪ್ರಭಾವಕ್ಕೊಳಗಾಗದೆ ಯುದ್ಧಗಳನ್ನು ತಡೆಯುವ ಮೂಲಕ ವಿಶ್ವ ಶಾಂತಿಗಾಗಿ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕೆಂದು ಎಡಪಕ್ಷಗಳು ಭಾರತ ಸರ್ಕಾರವನ್ನು ಆಗ್ರಹಿಸುತ್ತವೆ. ಇಸ್ರೇಲ್‍ನ ದಮನಕಾರಿ ನಿಲುವನ್ನು ಮತ್ತು ಯುದ್ಧವನ್ನು ಪ್ರಚೋದಿಸುತ್ತಿರುವ ಅಮೆರಿಕದ ಸರ್ವಾಧಿಕಾರಿ ಧೋರಣೆಯನ್ನು ಸಹ ಬಲವಾಗಿ ಖಂಡಿಸಬೇಕೆಂದು ಭಾರತದ ಎಡ ಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ಪ್ರತಿಭಟನೆಯನ್ನು ಉದ್ದೇಶಿಸಿ CPI ರಾಜ್ಯ ಸಹ ಕಾರ್ಯದರ್ಶಿ ಕಾಂ.ಅಮ್ಜದ್, CPIM ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಾಂ.ಮಹಂತೇಶ್, CPIML ಮುಖಂಡರಾದ ಅತ್ರಿಕಾ, SUCI(C) ರಾಜ್ಯ ಮುಖಂಡರಾದ ರಾಜಶೇಖರರವರು ಮಾತನಾಡಿದರು. ಪ್ರತಿಭಟನೆಯಲ್ಲಿ ಎಡ ಪಕ್ಷಗಳ ಹಲವಾರು ಜಿಲ್ಲಾ ಮತ್ತು ರಾಜ್ಯ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...