ವ್ಹೀಲಿಂಗ್ | ಅಪ್ರಾಪ್ತನಿಗೆ ವಾಹನ ಕೊಟ್ಟ ಮಾಲೀಕನಿಗೆ ₹25,200 ದಂಡ ವಿಧಿಸಿದ ನ್ಯಾಯಾಲಯ

Date:

ಅಪ್ರಾಪ್ತನೊಬ್ಬ ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟ ಮಾಲೀಕನನ್ನು ದೂಷಿ ಎಂದು ಪರಿಗಣನೆ ಮಾಡಿ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯ ₹25,200 ದಂಡ ವಿಧಿಸಿ ಆದೇಶಿಸಿದೆ.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರ ನಡೆದು ಬಾಲಕ ದೂಷಿ ಎಂದು ಸಾಬೀತಾಗಿತ್ತು. ಈ ಹಿನ್ನೆಲೆ, ಬಾಲಕನಿಗೆ ₹2,000 ದಂಡ ಹಾಗೂ ಅಪಾಪ್ತ ವಯಸ್ಕನಿಗೆ ವಾಹನ ಚಾಲನೆ ಮಾಡಲು ನೀಡಿದ ವಾಹನ ಮಾಲೀಕ ಸೆಲ್ವಮ್ (59) ಅವರಿಗೆ ₹25,200 ದಂಡ ಕಟ್ಟುವಂತೆ ನ್ಯಾಯಾಲಯ ಆದೇಶ ನೀಡಿದೆ.

ಏನಿದು ಪ್ರಕರಣ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2023ರ ಜನವರಿ 9ರಂದು ಸಂಜೆ 4.30ರ ಸುಮಾರಿಗೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಅಪ್ರಾಪ್ತರು ವ್ಹೀಲಿಂಗ್ ಮಾಡುತ್ತಿದ್ದರು.

ಇದನ್ನು ಗಮನಿಸಿದ ಕರ್ತವ್ಯನಿರತ ಪೊಲೀಸರು ವ್ಹೀಲಿಂಗ್ ಮಾಡುವುದನ್ನು ತಡೆದು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ದೀರ್ಘಕಾಲದ ಪ್ರಕರಣ: ರಾಜ್ಯದ ಪೊಲೀಸರಿಂದ 200 ಮಂದಿ ಆರೋಪಿಗಳ ಬಂಧನ

ವ್ಹೀಲಿಂಗ್ ಮಾಡುತ್ತಿದ್ದವನು ಬಾಲಕನಾದ ಕಾರಣ ಆತನ ವಿರುದ್ಧ ಬಾಲ ನ್ಯಾಯಮಂಡಳಿಗೆ ದೋಷಾರೋಪಣಾ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ, ಬಾಲಕ ದೂಷಿ ಎಂಬುದು ಸಾಬೀತಾಗಿತ್ತು. ಹೀಗಾಗಿ, ಬಾಲಕನಿಗೆ ₹2,000 ಹಾಗೂ ವಾಹನದ ಮಾಲೀಕನಿಗೆ ₹25,200 ದಂಡ ವಿಧಿಸಿ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯ 2023 ಜೂನ್ 5ರಂದು ಆದೇಶಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...

ರಾಮೇಶ್ವರ ಕೆಫೆ ಬಾಂಬ್ ಪ್ರಕರಣ | ಅಗತ್ಯ ಬಿದ್ದರೆ ತನಿಖೆ ಎನ್‌ಐಎಗೆ ವಹಿಸುತ್ತೇವೆ: ಸಿಎಂ ಸಿದ್ದರಾಮಯ್ಯ

"ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ವಹಿಸುವ ಬಗ್ಗೆ ಅಗತ್ಯ...

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...