ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ? ಮುಖ್ಯಮಂತ್ರಿ ಚಂದ್ರು ಪ್ರಶ್ನೆ

Date:

Advertisements

ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದರು.

ನಗರದ ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “1931ರಲ್ಲಿ ಜಾತಿ ಗಣತಿ ಆಗಿರುವುದು ಬಿಟ್ಟರೆ ಇದುವರೆಗೂ ಜಾತಿಗಣತಿ ಮಾಡಿಲ್ಲ. ಪ್ರತಿ 10 ವರ್ಷಗಳಿಗೆ ಒಮ್ಮೆ ಜನಗಣತಿ ಮಾಡಿಕೊಂಡು ಬಂದಿದ್ದಾರೆ. ಮೀಸಲಾತಿ ಇದೆ. ಆದರೆ, ಜಾತಿ ಗಣತಿಯೇ ಇಲ್ಲ. ಅಂದಾಜಿನ ಮೇಲೆ ಮೀಸಲಾತಿ ಕೊಡುತ್ತಾ ಬಂದಿದ್ದು, ಹಲವು ಸಮುದಾಯಗಳಿಗೆ ಅನ್ಯಾಯ ಆಗಿದೆ” ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 2013ರಲ್ಲಿ ಶಾಶ್ವತ ಹಿಂದುಳಿದ ಆಯೋಗಕ್ಕೆ ರಾಜ್ಯದ ಜಾತಿಗಣತಿ ಮಾಡಲು ಆದೇಶ ನೀಡಿದ್ದರು. ಇದಕ್ಕಾಗಿ ₹180 ಕೋಟಿ ಬಿಡುಗಡೆ ಮಾಡಲಾಗಿತ್ತು. ನಂತರ 2015ರಲ್ಲಿ ಜಾತಿ ಗಣತಿ ವರದಿ ಸಂಪೂರ್ಣಗೊಂಡಿತು. ಇದಕ್ಕಾಗಿ ಹಿಂದುಳಿದ ವರ್ಗಗಳ ಆಯೋಗ ರಾಜ್ಯದಾದ್ಯಂತ ಮನೆ ಮನೆಗೆ ತೆರಳಿ ಗಣತಿ ನಡೆಸಿತ್ತು. ದುರಂತ ಎಂದರೆ, ಆ ವರದಿಯನ್ನು ಆಯೋಗ ಇನ್ನೂ ಸರ್ಕಾರಕ್ಕೆ ಸಲ್ಲಿಸಿಲ್ಲ. ಸಿಎಂ ಆಗಿದ್ದ ಸಿದ್ದರಾಮಯ್ಯ ಅವರೇ ಆ ವರದಿಯನ್ನು ರಾಜಕೀಯ ಒತ್ತಡಗಳಿಂದ ಸ್ವೀಕರಿಸಲಿಲ್ಲ” ಎಂದು ತಿಳಿಸಿದರು.

Advertisements

“ಜಾತಿ ಗಣತಿ ಹೊರಗೆ ಬಂದರೆ ರಾಜಕೀಯದಲ್ಲಿ ಏರುಪೇರು ಉಂಟಾಗಲಿದೆ ಎನ್ನುವ ಕಾರಣಕ್ಕೆ ತಡೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಕಾರ್ಯದರ್ಶಿಗಳು ವರದಿ ಸಿದ್ದವಾಗಿದೆ ಎಂದು ಸರ್ಕಾರಕ್ಕೆ ಪತ್ರ ಬರೆದರೂ, ವರದಿಯನ್ನು ತೆಗೆದುಕೊಂಡಿಲ್ಲ. 7 ಸದಸ್ಯರಲ್ಲಿ ಇಬ್ಬರು ಸಹಿ ಹಾಕಿಲ್ಲ. ಆಯೋಗದ ಅಧ್ಯಕ್ಷ ಕಾಂತರಾಜ್ ಅವರೇ ಸಹಿ ಹಾಕಿಲ್ಲ ಎನ್ನಲಾಗುತ್ತಿದೆ. ಸಿದ್ದರಾಮಯ್ಯನವರ ಬಳಿಕ ಎಚ್‌ಡಿ ಕುಮಾರಸ್ವಾಮಿ ಅವರಿಗೆ ವರದಿ ನೀಡಲು ಹೋದಾಗ ಅವರು ಕೂಡ ತೆಗೆದುಕೊಂಡಿಲ್ಲ ಎಂದು ಶಾಶ್ವತ ಆಯೋಗ ಹೇಳಿದೆ. ನಂತರ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕೂಡ ಈ ವರದಿಯನ್ನು ತೆಗೆದುಕೊಳ್ಳದೆ ತಿರಸ್ಕಾರ ಮಾಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೂರ್ವ ವಲಯದಲ್ಲಿ ಅತಿ ಹೆಚ್ಚು ಬೀದಿನಾಯಿಗಳು ವಾಸ

ಈಗಲಾದರೂ ಜಾತಿ ಗಣತಿ ವರದಿ ಬಹಿರಂಗಪಡಿಸಲಿ

“ಈಗ ಸಿದ್ದರಾಮಯ್ಯ ಅವರೇ ಮತ್ತೆ ಸಿಎಂ ಆಗಿದ್ದಾರೆ. ಎಸ್‌ಟಿ ವರ್ಗಕ್ಕೇ ಸೇರಬೇಕೆನ್ನುವ ಒತ್ತಾಯವನ್ನು ಕುರುಬ ಸಮಾಜವೇ ಮಾಡಿದೆ. ಅದಕ್ಕಾಗಿ ಸುಮ್ಮನಾಗಿದ್ದಾರೆ ಎನಿಸುತ್ತದೆ. ಶಾಶ್ವತ ಸಮಿತಿ ಅಧ್ಯಕ್ಷ ಕಾಂತರಾಜ್ ಸ್ಥಾನಕ್ಕೆ ಈಗ ಜಯಪ್ರಕಾಶ್ ಹೆಗಡೆ ಬಂದಿದ್ದು, ನಾವು ಅವರನ್ನು ಭೇಟಿ ಮಾಡಿದಾಗ, ವರದಿ ಸಂಪೂರ್ಣವಾಗಿ ಸಿದ್ಧವಾಗಿದೆ. ನಾನು ಕೊಡಲು ಸಿದ್ಧ ಎಂದು ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದೆ. ಮೂರು ಬಾರಿ ಜಾತಿ ಗಣತಿ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ಹೇಳಿಕೆ ನೀಡಿದ್ದಾರೆ. ನವೆಂಬರ್ ಒಳಗಡೆ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಜಯಪ್ರಕಾಶ್ ಹೆಗಡೆ ನವೆಂಬರ್ ತಿಂಗಳಿನಲ್ಲಿ ನಿವೃತ್ತರಾಗುತ್ತಿದ್ದಾರೆ. ಅದಕ್ಕೇ ಈ ರೀತಿ ಹೇಳಿಕೆ ನೀಡುತ್ತಿರಬೇಕು” ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.

“ತುರ್ತಾಗಿ ಸಿಎಂ ಸಿದ್ದರಾಮಯ್ಯ ಅವರು ವರದಿಯನ್ನು ತೆಗೆದುಕೊಂಡು ವಿಧಾನಸಭೆಯಲ್ಲಿ ಮಂಡಿಸಲಿ, ನಂತರ ಜನ ಅದನ್ನು ತೀರ್ಮಾನ ಮಾಡುತ್ತಾರೆ. ಹಣ ಖರ್ಚು ಮಾಡಿ ಸಮೀಕ್ಷೆ ಮಾಡಿದ್ದಾರೆ. ಅದನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿಕೆ ನೀಡಲಿ” ಎಂದರು.

“ಒಂದು ವೇಳೆ ನವೆಂಬರ್ ಒಳಗೆ ಅವರು ಜಾತಿಗಣತಿ ವರದಿ ತೆಗೆದುಕೊಳ್ಳದಿದ್ದರೆ, ಸದನದಲ್ಲಿ ಮಂಡಿಸದೆ ಇದ್ದರೆ, ರಾಜ್ಯಪಾಲರಿಗೆ ವರದಿಯನ್ನು ನೀಡದೆ ಇದ್ದರೆ ಜನಾಂದೋಲನ ರೂಪಿಸುವುದಾಗಿ” ಸರ್ಕಾರಕ್ಕೆ ಎಚ್ಚರಿಸಿದರು.

“ಮತಬ್ಯಾಂಕಿಗೆ ತೊಂದರೆಯಾಗುವ ಕಾರಣಕ್ಕೆ ಅವರು ಜಾತಿ ಗಣತಿ ವರದಿ ತೆಗೆದುಕೊಂಡಿಲ್ಲ ಎನ್ನುವ ಅನುಮಾನ ಇದೆ” ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X