ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ಬೆಂಗಳೂರಿನಲ್ಲಿ ದಿನವಿಡೀ ಮಳೆ ಸುರಿದು ಸಾರ್ವಜನಿಕರು ದಿನನಿತ್ಯದ ಕೆಲಸ ಕಾರ್ಯಗಳಿಗೆ ತೊಂದರೆಯುಂಟಾಗಿದೆ. ಭಾರಿ ಮಳೆಯಿಂದಾಗಿ ಉದ್ಯಾನನಗರಿಯ ಹಲವು ಬಡಾವಣೆಗಳು ಜಲಾವೃತಗೊಂಡವು.
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಉತ್ತರ ಬೆಂಗಳೂರಿನ ಅತಿದೊಡ್ಡ ಟೆಕ್ ಪಾರ್ಕ್‍ಗಳಲ್ಲಿ ಒಂದಾದ ಮಾನ್ಯತಾ ಟೆಕ್ ಪಾರ್ಕ್ ಕೂಡ ಜಲಾವೃತಗೊಂಡಿದೆ. ಈ ಹಿನ್ನೆಲೆ ಕೆಲವು ನೌಕರರು ತಮ್ಮ ಕಚೇರಿಗೆ ತಲುಪಲಾಗದೇ ಸಂಕಷ್ಟ ಅನುಭವಿಸಬೇಕಾಯಿತು.
ಮಾನ್ಯತಾ ಟೆಕ್ ಪಾರ್ಕ್ ಹಿಂಭಾಗದ ರಾಮಯ್ಯ ಲೇಔಟ್ ರಸ್ತೆಗಳು ಮಳೆ ನೀರು ಹಾಗೂ ರಾಜಕಾಲುವೆ ನೀರಿನಿಂದ ತುಂಬಿ ಹರಿಯುತ್ತಿದೆ. ಎಲಿಮೆಂಟ್ಸ್ ಮಾಲ್ ಮುಂಭಾಗದ ರಸ್ತೆ ನದಿಯಂತೆ ಮಾರ್ಪಾಡುಗೊಂಡಿದ್ದು, ರಸ್ತೆಯಲ್ಲಿ ಹಲವರು ವಾಹನಗಳು ಕೆಟ್ಟು ನಿಂತಿದೆ. ಹಾಗಾಗಿ ಎರಡು ಭಾಗದ ರಸ್ತೆಗಳನ್ನು ಕೂಡ ಬ್ಲಾಕ್ ಮಾಡಲಾಗಿದೆ. ಥಣಿಸಂದ್ರ ಮುಖ್ಯರಸ್ತೆ ಕೂಡ ಸಂಪೂರ್ಣ ಜಲಾವೃತಗೊಂಡಿದೆ.
ಬೆಂಗಳೂರಿನಲ್ಲಿ ಒಂದು ವಾರದವರೆಗೆ ಮಳೆ ಮುಂದುವರಿಯುವ ಸೂಚನೆ ಇದೆ. ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಹವಾಮಾನ ವರದಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 25.4 ° C ಮತ್ತು ಕನಿಷ್ಠ ತಾಪಮಾನ 20.7 ° C ಮತ್ತು 3.3 ಮಿಮೀ ಮಳೆ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!
ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 15 ರಂದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಅಥವಾ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಹೆಚ್ಚುವರಿಯಾಗಿ, ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಅಕ್ಟೋಬರ್ 16ರ ವೇಳೆಗೆ ಭಾರೀ ಮಳೆಯಾಗಲಿದ್ದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಉತ್ತರ ಒಳ ಕರ್ನಾಟಕದ ಧಾರವಾಡ, ಗದಗ ಮತ್ತು ಹಾವೇರಿಯ ಕೆಲವು ಭಾಗಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 17 ರವರೆಗೆ, ಕರಾವಳಿ ಕರ್ನಾಟಕದಾದ್ಯಂತ ಅಲ್ಲಲ್ಲಿ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ, ಕೊಡಗು ಮತ್ತು ರಾಮನಗರದಂತಹ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯೊಂದಿಗೆ ದಕ್ಷಿಣ ಒಳನಾಡಿನ ಭಾಗಗಳಲ್ಲಿಯೂ ವರುಣನ ಸಿಂಚನವಾಗಲಿದೆ.
