ಬ್ಯಾಂಕ್ ಪರೀಕ್ಷೆ: ಹಿಂದಿಯವರು ಹಿಂದಿಯಲ್ಲಿ ಬರೆಯಬಹುದಾದರೆ ಕನ್ನಡಿಗರು ಕನ್ನಡದಲ್ಲೇಕೆ ಬರೆಯಬಾರದು?: ಎಎಪಿ

Date:

Advertisements

ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ನಡೆಸುತ್ತಿರುವುದು ಏಕೆ? ಇದರಿಂದ ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ.

ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದಲ್ಲಿರುವ ಹಿಂದಿ ಮಾತೃಭಾಷಿಗರು ಹಿಂದಿಯಲ್ಲೇ ಪರೀಕ್ಷೆ ತೆಗೆದುಕೊಳ್ಳಬಹುದಾದರೆ ಕನ್ನಡಿಗರು ಹಾಗೂ ದೇಶದ ಇನ್ನಿತರ ಮಾತೃ ಭಾಷಿಗರಿಗೂ ಅವರದೇ ಭಾಷೆಯ ಆಯ್ಕೆ ಏಕಿಲ್ಲ? ತಮ್ಮ ಮಾತೃಭಾಷೆಯನ್ನು ಬಿಟ್ಟು ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ತೆಗೆದುಕೊಳ್ಳುವ ಅನಿವಾರ್ಯ ವಾತಾವರಣವಿದೆ ಏಕೆ? ಎಂದು ಪ್ರಶ್ನಿಸಿದ್ದಾರೆ.

“ಇದು ಹಿಂದಿ ಹೇರಿಕೆಯಾಗಿದೆ ಹಾಗೂ ಹಿಂದಿಯೇತರರನ್ನು 2ನೇ ದರ್ಜೆ ಭಾರತೀಯರನ್ನಾಗಿ ಪರಿಗಣಿಸುವ ಕುತಂತ್ರವಾಗಿದೆ. ಅಂದಾಜು ಏಳು ಕೋಟಿ ಕನ್ನಡಿಗರು ಕರ್ನಾಟಕದಲ್ಲಿ, ಮತ್ತು ಅಂದಾಜು 82 ಕೋಟಿ ಹಿಂದಿಯೇತರರು ಭಾರತದಲ್ಲಿದ್ದಾರೆ. ಈ ಕಾರ್ಯವು ಇವರನ್ನು ಗುಲಾಮಗಿರಿಗೆ ತಳ್ಳುವ ಪ್ರಯತ್ನವಲ್ಲವೇ?” ಎಂದು ಪ್ರಶ್ನಿಸಿದರು.

Advertisements

ಸಂಸ್ಕೃತಕ್ಕೂ ಬ್ಯಾಂಕ್‌ ಸೇವೆಗಳಿಗೂ ಏನು ಸಂಬಂಧ? ಬ್ಯಾಂಕುಗಳಲ್ಲಿ ಕನ್ನಡಕ್ಕೆ ಅವಕಾಶ ಇಲ್ಲ, ಸಂಸ್ಕೃತಕ್ಕೆ ಇದೆ ಎನ್ನುವುದಾದರೆ, ಇದು ವಿಪರ್ಯಾಸವಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 63 ವರ್ಷದ ಅಜ್ಜಿಗೆ ಪ್ರೀತಿಸಿ ಮೋಸ ಮಾಡಿದ 70 ವರ್ಷದ ಅಜ್ಜ: ದೂರು ದಾಖಲು

ಕರ್ನಾಟಕದಲ್ಲಿ ಹಾಗೂ ಬೇರೆ ಎಲ್ಲೆಡೆ ಕೂಡ ಜನರಲ್ಲಿ ನನ್ನ ಮನವಿ. ಬ್ಯಾಂಕುಗಳಲ್ಲಿ ಈ ಭಾಷಾ ನೀತಿಯ ಅನ್ಯಾಯವನ್ನು ತಡೆಯಲು ಮತ್ತು ಈಗಾಗಲೇ ಆಗಿರುವ ಅನ್ಯಾಯಕ್ಕೆ ಪರಿಹಾರ ಒದಗಿಸಲು ನಾವೆಲ್ಲರೂ ಕೈ ಜೋಡಿಸೋಣ. ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಮೋದಿಯವರ ಮತ್ತು ಬಿಜೆಪಿಯ ಎಲ್ಲ ಬೆಂಬಲಿಗರಿಗೆ ನಮ್ಮ ಸಂದೇಶವಿದು, ದಯವಿಟ್ಟು ಎಚ್ಚರಗೊಳ್ಳಿ. ಅವರು ನಿಮಗೆ ಏನು ಮಾಡುತ್ತಿದ್ದಾರೆಂದು ಅರ್ಥ ಮಾಡಿಕೊಳ್ಳಿ. ನಿಮ್ಮದೇ ಗುಲಾಮಗಿರಿಗೆ ನೀವು ವೋಟು ಹಾಕಬೇಡಿ. ನಮ್ಮೊಡನೆ ಕೈ ಜೋಡಿಸಿ. ನಾವೆಲ್ಲರೂ ಬಟ್ಟಾಗಿ ಬದಲಾವಣೆ ತರೋಣ ಎಂದು ರಮೇಶ್ ಬೆಳ್ಳಂಕೊಂಡ ರಾಜ್ಯದ ಜನತೆಗೆ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಮಾಧ್ಯಮ ಸಂಚಾಲಕ ಅನಿಲ್ ನಾಚಪ್ಪ ಅಶ್ವಿನಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X