ಬೆಂಗಳೂರು: ಪಾದಚಾರಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ, 9 ತಿಂಗಳ ಮಗು ಸಾವು

Date:

ಪಾದಚಾರಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಆಕೆಯ 9 ತಿಂಗಳ ಮಗು ಸಾವನಪ್ಪಿರುವ ಘಟನೆ ಪೂರ್ವ ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.

- Advertisement -

ಮೃತರನ್ನು 23 ವರ್ಷದ ಸೌಂದರ್ಯ ಮತ್ತು ಅವರ 9 ತಿಂಗಳ ಪುತ್ರಿ ಸುವೀಕ್ಷಾ ಎಂದು   ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಸೌಂದರ್ಯ ಅವರು ತಮ್ಮ 9 ತಿಂಗಳ ಮಗುವಿನೊಂದಿಗೆ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಾದಚಾರಿ ರಸ್ತೆಯಲ್ಲಿ ವಿದ್ಯುತ್‌ ಸಂಚಾರವಾಗುತ್ತಿದ್ದ ತಂತಿ ಮೇಲೆ ಕಾಲಿಟ್ಟಿದ್ದಾರೆ. ತಕ್ಷಣ ವಿದ್ಯುತ್ ಸ್ಪರ್ಷವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ದಾರಿಹೋಕರು ಕೂಡಲೇ ಕಾಡುಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ)ನ ಮೂವರು ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ವೈಟ್‌ಫೀಲ್ಡ್) ಡಾ ಶಿವಕುಮಾರ್ ಗುಣಾರೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಬಲ ಜಾತಿಗಳ ಜೋಡೆತ್ತುಗಳು, ಬಿಜೆಪಿಗರಿಗೇ ಬೇಡವಾಗಿದ್ದೇಕೆ?

“ವಿದ್ಯುತ್ ಸಂಚಾರವಾಗುತ್ತಿರುವ ತಂತಿ ಕೆಳಗೆ ನೇತಾಡುತ್ತಿತ್ತು? ಬಸ್ ನಿಲ್ದಾಣದ ಪಕ್ಕದಲ್ಲಿರುವ ಈ ಪಾದಚಾರಿ ಮಾರ್ಗದಲ್ಲಿ ಸಾವಿರಾರು ಜನ ಸಂಚರಿಸುತ್ತಾರೆ. ಮೆಟ್ರೋ ನಿಲ್ದಾಣ ಸ್ವಲ್ಪ ದೂರದಲ್ಲಿದೆ. ಇದು ಕ್ರಿಮಿನಲ್ ಮನೋಭಾವದ ನಿರ್ಲಕ್ಷ್ಯ.ಯುವತಿ ಹಾಗೂ ಆಕೆಯ 9 ತಿಂಗಳ ಮಗುವಿನ ಪ್ರಾಣವನ್ನು ಕ್ರೂರವಾಗಿ ತೆಗೆಯಲಾಗಿದೆ” ಎಂದು ವೈಟ್‌ಫೀಲ್ಡ್ ರೈಸಿಂಗ್, ಸಿಟಿಜನ್ ಫೋರಂ ಸಂಘಟನೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...