ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ; ಇದು ದುಶ್ಯಾಸನ ರಾಜ್ಯವೆಂದ ಹೈಕೋರ್ಟ್‌

Date:

ಪ್ರೇಮಿಗಳಿಬ್ಬರು ಊರು ತೊರೆದು ಹೋದದ್ದಕ್ಕೆ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದ ಕುರಿತು ಕರ್ನಾಟಕ ಹೈಕೋರ್ಟ್‌ ಆಕ್ರೋಶ ವ್ಯಕ್ತಪಡಿಸಿದೆ. ಮಹಿಳೆಯ ನೆರವಿಗೆ ಯಾರೊಬ್ಬರೂ ಮುಂದಾಗಿಲ್ಲ. ಇದು ದುಶ್ಯಾಸನ ರಾಜ್ಯವೆಂದು ಹೇಳಿದೆ.

- Advertisement -

ಬೆಳಗಾವಿಯ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಘಟನೆ ಸಂಬಂಧ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ದ್ರೌಪದಿಯನ್ನು ವಿವಸ್ತ್ರಗೊಳಿಸಿದಾಗ ರಕ್ಷಿಸಲು ಕೃಷ್ಣನಿದ್ದ. ಆದರೆ, ಬೆಳಗಾವಿ ಮಹಿಳೆಯ ನೆರವಿಗೆ ಯಾರು ಬಂದಿಲ್ಲ. ಇದು ದುಶ್ಯಾಸನರ ಕಾಲವಾಗಿದೆ. ಇಲ್ಲಿ ಕಾನೂನಿನ ಭಯವಿಲ್ಲ ಎಂಬ ಸಂದೇಶ ಹೋಗುತ್ತಿದೆ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ.

“ಮಗ ಮಾಡಿದ ತಪ್ಪಿಗೆ ತಾಯಿಗೆ ಶಿಕ್ಷೆ ನೀಡಲಾಗಿದೆ. ಸಂತ್ರಸ್ತೆಯನ್ನು ಪ್ರಾಣಿಗಿಂತ ಕೀಳಾಗಿ ನಡೆಸಿಕೊಳ್ಳಲಾಗಿದೆ. ಆ ಸಮಯದಲ್ಲಿ ಸಂತ್ರಸ್ತೆ ಎದುರಿಸಿರುವ ನೋವನ್ನು ಊಹಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.

“ಟಿವಿಗಳಲ್ಲಿ ನಡೆಯುವ ಸಂಭಾಷಣೆಯ ವಿರುದ್ಧ ಕ್ರಮಕ್ಕೆ ಮುಂದಾಗುವ ಆಯೋಗ, ಈಗ ಎಲ್ಲಿದೆ. ಮಹಿಳೆಯನ್ನು ಹೀನಾಯವಾಗಿ ಹಿಂಸಿಸಲಾಗಿದೆ. ಆದರೆ, ಮಹಿಳಾ ಆಯೋಗ ಮತ್ತು ಮಾನವ ಹಕ್ಕುಗಳ ಆಯೋಗ ಏನು ಮಾಡುತ್ತಿವೆ” ಎಂದು ಕಿಡಿಕಾರಿದೆ.

“ಸಂತ್ರಸ್ತೆಗೆ ಅತ್ಯುತ್ತಮ ಚಿಕಿತ್ಸೆ ಮತ್ತು ಕೌನ್ಸೆಲಿಂಗ್ ಅಗತ್ಯವಿದೆ. ಮಹಿಳೆಗೆ ಚಿಕಿತ್ಸೆ ನೀಡಲಾಗಿದೆಯೇ? ಪೊಲೀಸರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ” ಎಂದು ಎಂಬುದನ್ನು ವರದಿ ನೀಡುವಂತೆ ಅಡ್ವೋಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...