ಯಾದಗಿರಿ ರೇಪ್‌ ಪ್ರಕರಣ | ನಿರ್ಭಯಾಳಿಗೆ ಸಿಕ್ಕ ನ್ಯಾಯ ದಲಿತ- ಅಲೆಮಾರಿಗಳಿಗೆ ಯಾಕಿಲ್ಲ?

Date:

Advertisements

ದೆಹಲಿಯ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ದೇಶದೆಲ್ಲೆಡೆ ಸಾರ್ವಜನಿಕ ವಲಯದಲ್ಲಿ ಭುಗಿಲೆದ್ದ ಆಕ್ರೋಶ ಮತ್ತು ಅದಕ್ಕೆ ಸರ್ಕಾರ ಸ್ಪಂದಿಸಿದ ರೀತಿಯಲ್ಲಿ ಬಡ, ದಲಿತ ಸಮುದಾಯಗಳ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಕೊಲೆ ನಡೆದಾಗ ಸ್ಪಂದಿಸದಿರುವುದು ದುರದೃಷ್ಟಕರ ಎಂದು ವಿವಿಧ ಸಂಘಟನೆಗಳ ಮುಖಂಡರು ವಿಷಾದ ವ್ಯಕ್ತಪಡಿಸಿದರು.

ಚಿಂದಿ ಆಯಲು ಹೋಗಿದ್ದ ಯಾದಗಿರಿಯ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಯುವತಿಯರ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಮುಖಂಡ ಡಾ ವಡ್ಡಗೆರೆ ನಾಗರಾಜಯ್ಯ, “ಇಬ್ಬರು ಬಾಲಕಿಯರ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ ಈವರೆಗೆ ಆರೋಪಿಗಳನ್ನು ಪೊಲೀಸರು ಬಂಧಿಸದಿರುವುದು ಖಂಡನೀಯ. ಚಿಕ್ಕ ಹಳ್ಳಿಯಲ್ಲಿ ನಡೆದ ಘಟನೆಯ ಆರೋಪಿಗಳನ್ನು ಬಂಧಿಸಲಾಗದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ ನೋವುಗಳಿಗೆ ಸ್ಪಂದಿಸುವ ನಾಯಕ, ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರ ಆರೋಪಿಗಳನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆರೋಪಿಗಳು ಸಿಗುತ್ತಿಲ್ಲ ಎಂದು ಪೊಲೀಸರು ಹೇಳುತ್ತಿದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದರು.

Advertisements

ಹಿರಿಯ ಚಿಂತಕ ಜಿ ರಾಮಕೃಷ್ಣ ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಬರುತ್ತಿದೆ. ಉತ್ತರಪ್ರದೇಶದಲ್ಲಿ ದಲಿತ ಹೆಣ್ಣುಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಯಾರು ಎಂದು ಗೊತ್ತಿರುತ್ತದೆ, ಆದರೆ ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್‌ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್‌ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಯಮುನೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನಕ್ಕೆ ಒಂದು ತರಹದ ನೀರು, ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ. ಇದೇ ತರ ಈ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇನೂ ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದರು.

WhatsApp Image 2025 02 25 at 8.20.54 PM

“ಇಡೀ ದೇಶದಲ್ಲಿ ಯಾವುದೇ ಸರ್ಕಾರವಾದರೂ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ. ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. ಜನರಲ್‌ ಪಬ್ಲಿಕ್‌ ಸೆಂಟಿಮೆಂಟ್‌ ಇವರ ಜೊತೆಗೆ ಇರಬೇಕಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗಿದೆ. ಯಾಕೆ ಹೀಗಿದ್ದಾರೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ, ನೌಕರಿ ಕೊಡಿ ಎಂದು ಕೇಳಬೇಕಿದೆ. ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ. ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಇಡೀ ಸಮಾಜಕ್ಕೆ ನಾಚಿಕೆಯಾಗಬೇಕು. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.

ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾ, ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟಕ, ರಾಜ್ಯ ದಕ್ಕಲಿಗರ ಸಂಘ, ಸುಡುಗಾಡು ಸಿದ್ದ ಮಹಾಸಂಘ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ದಲಿತ ವಿದ್ಯಾರ್ಥಿ ಪರಿಷತ್ತು, ಕರ್ನಾಟಕ ಜನಶಕ್ತಿ, ನಾವೆದ್ದು ನಿಲ್ಲದಿದ್ದರೆ, ಜಾಗೃತ ಕರ್ನಾಟಕ, AICCTU, AIPWA, ದಲಿತ ವಿದ್ಯಾರ್ಥಿ ಪರಿಷತ್ತು ಸೇರಿದಂತೆ ಹಲವು ಸಂಘಟನೆಗಳು ಜಂಟಿಯಾಗಿ ಈ ಪ್ರತಿಭಟನೆ ಆಯೋಜಿಸಿದ್ದವು.

05b4125da454a168537d9df817254267
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಪಾವತಿ ಗೊಂದಲ ಬಗೆಹರಿಸಲು ಕ್ರಮ: ಡಿ.ಕೆ.ಶಿವಕುಮಾರ್

ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರ ವೇತನ ಗೊಂದಲವನ್ನು ಅಧಿಕಾರಿಗಳ ಜತೆ ಚರ್ಚಿಸಿ,...

ನಗರ್ತಪೇಟೆ ಅಗ್ನಿ ಅವಘಡ | ಗೃಹ ಸಚಿವ ಪರಮೇಶ್ವರ್‌, ಸಚಿವ ಜಮೀರ್‌ ಅಹಮದ್‌ ಖಾನ್ ಭೇಟಿ

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ...

Download Eedina App Android / iOS

X