ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ ನಿಯಮದಲ್ಲಿ ತಿದ್ದುಪಡಿ ಕುರಿತು ಚರ್ಚಿಸಲು ಯೂತ್ ಸೋಲಿಡಾರಿಟಿ ಮನವಿ

Date:

ಸಾರ್ವಜನಿಕ ಶಿಕ್ಷಣ ಇಲಾಖೆಯ ನೇಮಕಾತಿ ನಿಯಮದ ತಿದ್ದುಪಡಿ ಮಾಡಲು ಕರಡು ಪ್ರತಿಯಲ್ಲಿ ಕೆಲವೊಂದು ನ್ಯೂನತೆಗಳಿದ್ದು, ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಜತೆಗೆ ಚರ್ಚಿಸುವಂತೆ ಒತ್ತಾಯಿಸಿ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಕರ್ನಾಟಕ ಘಟಕದಿಂದ ಬೆಂಗಳೂರಿನ ಶಿವಾಜಿನಗರ ಶಾಸಕ‌ ರಿಝ್ವಾನ್ ಅರ್ಷದ್‌ಗೆ ಮನವಿ ಸಲ್ಲಿಸಲಾಗಿದೆ.

- Advertisement -

“ಕಳೆದ ಜೂನ್‌ 29ರಂದು ಪ್ರಕಟಿಸಲಾದ ಕರಡು ಅಧಿಸೂಚನೆ ಸಂಖ್ಯೆ EP 50 DPI 2026 ರನ್ವಯ 1 ರಿಂದ 8ನೇ ತರಗತಿಗಳ ಕಂಪ್ಯೂಟರ್, ವಿಜ್ಞಾನ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷೆಯ ಅರ್ಹತೆಯ ಕುರಿತು ನಿಗದಿಪಡಿಸಿರುವ ಕರಡು ಅಧಿಸೂಚನೆಯಲ್ಲಿ ಕನ್ನಡ ಭಾಷೆಯ ಅರ್ಹತೆಗೆ ಸಂಬಂಧಿಸಿ ಜಾರಿಯಲ್ಲಿರುವ ಕಾನೂನು ನಿಯಮಗಳಿಗೆ ಹೊಂದಿಕೆಯಾಗುವಂತೆ, ಅರ್ಹ ಅಭ್ಯರ್ಥಿಗಳಿಗೆ ನ್ಯಾಯಸಮ್ಮತ ಅವಕಾಶ ದೊರೆಯುವಂತೆ ಹಾಗೂ ಸರ್ಕಾರಿ ನೇಮಕಾತಿಯಲ್ಲಿ ಸಮಾನ ಅವಕಾಶದ ತತ್ವವನ್ನು ಕಾಪಾಡುವಂತೆ ಪರಿಷ್ಕರಿಸುವುದು ಅಗತ್ಯವಾಗಿದೆ‌” ಎಂದು ಸೋಲಿಡಾರಿಟಿ ಮನವಿಯಲ್ಲಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದೇ ವೇಳೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಹುದ್ದೆ ಹಾಗೂ ಇನ್ನಿತರ ವಿಭಾಗದಲ್ಲಿ ಆಯುರ್ವೇದ ಮತ್ತು ಹೋಮಿಯೋಪತಿ ಪದ್ಧತಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ.‌ ಇತರೆ ಪದ್ಧತಿಗಳಿಗೆ ಅವಕಾಶ ಲಭ್ಯವಾಗುತ್ತಿಲ್ಲ. ಹೀಗಾಗಿ, ಯುನಾನಿ, ಯೋಗ, ನ್ಯಾಚುರೋಪತಿ ಸೇರಿದಂತೆ ಎಲ್ಲ ಪದ್ಧತಿಗೂ ಕೂಡ ಸಮಾನ ಅವಕಾಶ ನೀಡುವಂತೆ ಒತ್ತಾಯಿಸಲಾಗಿದೆ.

“2023ರ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕೂಡಲೇ ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಂಡು, ಈ ಕುರಿತು ಮುಖ್ಯಮಂತ್ರಿಯವರಿಗೆ ಶಿಫಾರಸು ಪತ್ರ ಬರೆಯಬೇಕು” ಎಂದು ಆಗ್ರಹಿಸಿದರು.

ಮನವಿ ಸಲ್ಲಿಸಿದ ಸಂದರ್ಭದಲ್ಲಿ, ರಾಜ್ಯದ ಯುವಜನರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ, ಅವರ ಸಮಸ್ಯೆಗಳಿಗೆ ನೀತಿ ಮಟ್ಟದಲ್ಲಿ ಸ್ಪಂದಿಸುವ ಹಾಗೂ ಯುವಜನರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಯುವ ಆಯೋಗದ ಸ್ಥಾಪನೆ ಅತ್ಯಂತ ಅಗತ್ಯವಾಗಿದೆ ಎಂದು ವಿವರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಇಳಕಲ್ | SIR ಕಾನೂನು ನೆರವು ಸಮಿತಿಯ ಸಂಚಾಲಕರಾಗಿ ಶರಣಪ್ಪ ಆಮದಿಹಾಳ ಆಯ್ಕೆ

ರಾಜ್ಯದ ಯುವಜನರನ್ನು ಸಾಮಾಜಿಕ, ಪ್ರಜಾಸತ್ತಾತ್ಮಕ ಮತ್ತು ಅಭಿವೃದ್ಧಿಯ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಘೋಷಿಸಿರುವ ಭಾರತ್ ಜೋಡೊ ಯುವ ಸಂಘಟನೆ ರಚನೆಯ ನಿರ್ಧಾರ ಸ್ವಾಗತಾರ್ಹ. ಇದರ ಜತೆಗೆ, ರಾಜ್ಯ ಯುವ ಆಯೋಗವನ್ನು ಸ್ಥಾಪಿಸಿದಲ್ಲಿ ಯುವಜನಪರ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಯುವಜನರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಕೋರಲಾಗಿದೆ.

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಕರ್ನಾಟಕ ರಾಜ್ಯಾಧ್ಯಕ್ಷ ಡಾ. ನಸೀಂ ಅಹ್ಮದ್, ರಾಜ್ಯ ಕಾರ್ಯದರ್ಶಿಗಳಾದ ಇಸ್ಮಾಯಿಲ್ ತೀರ್ಥಹಳ್ಳಿ, ಅಸದುಲ್ಲಾ ಖಾನ್ ಝಕಿ, ರೆಹಾನ್ ಉಡುಪಿ ಹಾಗೂ ರಾಜ್ಯ ಮಾಧ್ಯಮ ಸಂಯೋಜಕ ಇರ್ಷಾದ್ ವೇಣೂರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...