ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಮಗುಚಿ 15 ಮಂದಿ ಸಾವು

Date:

ದಕ್ಷಿಣ ವಿಯೆಟ್ನಾಂನ ಫು ಕ್ವೋಕ್ (Phu Quoc) ದ್ವೀಪದ ಸಮೀಪ ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಮಗುಚಿ ಕನಿಷ್ಠ 15 ಮಂದಿ ಭಾರತೀಯರು ಜಲಸಮಾಧಿಯಾಗಿರುವ ದುರಂತ ಘಟನೆ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ‘ಎಪಿ’ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

- Advertisement -

ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ಈ ಬೋಟ್‌ನಲ್ಲಿ ಒಟ್ಟು 32 ಮಂದಿ ಭಾರತೀಯ ಪ್ರವಾಸಿಗರು ಹಾಗೂ ನಾಲ್ವರು ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ದುರಂತದ ಬೆನ್ನಲ್ಲೇ ಸ್ಥಳೀಯ ಆಡಳಿತವು ನಾಪತ್ತೆಯಾಗಿರುವವರಿಗಾಗಿ ತೀವ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ರಕ್ಷಣಾ ಪ್ರಕ್ರಿಯೆಗಳು ಭರದಿಂದ ಸಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಈ ಕುರಿತು ವಿಯೆಟ್ನಾಂನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ದುರಂತವನ್ನು ಖಚಿತಪಡಿಸಿದೆ. “ಕೆಲವು ಗಂಟೆಗಳ ಹಿಂದೆಯಷ್ಟೇ ವಿಯೆಟ್ನಾಂನ ಫು ಕ್ವೋಕ್ ದ್ವೀಪದ ಬಳಿ ಹಲವು ಭಾರತೀಯ ಪ್ರವಾಸಿಗರಿದ್ದ ಬೋಟ್ ಮುಗುಚಿಹೋಗಿರುವ ಶೋಚನೀಯ ಘಟನೆ ಸಂಭವಿಸಿದೆ. ಸ್ಥಳೀಯ ಅಧಿಕಾರಿಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಘಟನೆಯ ನಿಖರವಾದ ವಿವರಗಳನ್ನು ಕಲೆಹಾಕಲಾಗುತ್ತಿದೆ” ಎಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.

ಸಂತ್ರಸ್ತ ಕುಟುಂಬಗಳಿಗೆ ಮಾಹಿತಿ ಮತ್ತು ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಭಾರತೀಯ ರಾಯಭಾರ ಕಚೇರಿಯು ತುರ್ತು ಕ್ರಮಗಳನ್ನು ಕೈಗೊಂಡಿದೆ. ಹೋ ಚಿ ಮಿನ್ಹ್ (Ho Chi Minh) ನಗರದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಕಚೇರಿಯಲ್ಲಿ ಹಾಗೂ ಹನೋಯ್ (Hanoi) ನಲ್ಲಿ ವಿಶೇಷ ನಿಯಂತ್ರಣ ಕೊಠಡಿಗಳನ್ನು (Control Rooms) ಸ್ಥಾಪಿಸಲಾಗಿದೆ. ಸಂತ್ರಸ್ತರು ಹಾಗೂ ಅವರ ಕುಟುಂಬದವರು ಈ ಕೊಠಡಿಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ!

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು...

ಗದಗ | ಮಹಿಳೆಯರ ಆರ್ಥಿಕ ಸಬಲೀಕರಣವೇ ಸಮಾಜದ ಪ್ರಗತಿಗೆ ಬುನಾದಿ: ಕವಿತಾ ದಂಡಿನ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸ್ವಂತ ಆದಾಯ ಗಳಿಸುವ ಸಾಮರ್ಥ್ಯ ಬೆಳೆಸಿಕೊಂಡು, ಕುಟುಂಬ...