ಐಶ್ವರ್ಯ ಗೌಡ ವಂಚನೆ ಪ್ರಕರಣ | ಮಾಜಿ ಸಂಸದ ಡಿ ಕೆ ಸುರೇಶ್‌ಗೆ ಇ.ಡಿ ಸಮನ್ಸ್ ಜಾರಿ

Date:

ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ.

- Advertisement -

ಐಶ್ವರ್ಯಗೌಡ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್‌ಗೆ ಇ.ಡಿ ಗುರುವಾರ (ಜೂ.19) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಐಶ್ವರ್ಯ ಗೌಡ ಈ ಹಿಂದೆ ತಮ್ಮನ್ನು ಡಿ.ಕೆ. ಸುರೇಶ್ ಅವರ ತಂಗಿ ಎಂದು ಪರಿಚಯಿಸಿಕೊಂಡು ಹಲವು ಜನರನ್ನು ವಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಡಿ ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಯು ನೀಡಿದ ಹೇಳಿಕೆ ಮತ್ತು ದಾಖಲೆಗಳ ಆಧಾರದಲ್ಲಿ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿ ಕೆ ಸುರೇಶ್, “ಇಂದು ಮಧ್ಯಾಹ್ನ 12-30 ಗಂಟೆಗೆ ಇ.ಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ ಇ.ಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ. ಅವರು ಸಮನ್ಸ್ ಕೊಟ್ಟಿದ್ದಾರೆ. ಸಮನ್ಸ್‌ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ, ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಗಿದೆ” ಎಂದು ಹೇಳಿದರು.

“ಗುರುವಾರ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಕಿಕವಾಗಿ ತಿಳಿಸಿದ್ದೇನೆ. ಈಗ ಇ-ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

“ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

79ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...