Breaking | ಬಾನು ಮುಷ್ತಾಕ್‌ಗೆ ದಸರಾ ಉದ್ಘಾಟಿಸದಂತೆ ತಡೆ ಕೋರಿದ್ದ ಪ್ರತಾಪ್ ಸಿಂಹ ಅರ್ಜಿ‌ ವಜಾ

Date:

ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ.

- Advertisement -

ಮುಖ್ಯ ನ್ಯಾ. ವಿಭು ಬಬ್ರು ಮತ್ತು ನ್ಯಾ. ಸಿ.ಎಂ.ಜೋಶಿ ಅವರ ವಿಭಾಗೀಯ ನ್ಯಾಯಪೀಠವು ಸೋಮವಾರ (ಸೆ.15) ಪ್ರತಾಪ್ ಸಿಂಹ ಮತ್ತು ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ವಜಾ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಾಡಹಬ್ಬ ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ, ಆಚರಣೆಯ ಅವಿಭಾಜ್ಯ ಅಂಗವಾಗಿದೆ. ಹಾಗಿರುವಾಗ ಹಿಂದೂ ಅಲ್ಲದ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದನ್ನು ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರು ಪ್ರತ್ಯೇಕ 3 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು.‌

ಸರ್ಕಾರದ ನಿರ್ಧಾರದಿಂದ ಅರ್ಜಿದಾರರ ಯಾವುದೇ ಕಾನೂನಾತ್ಮಕ ಅಥವಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. ಅರ್ಜಿದಾರರಿಗೆ ದಂಡ ವಿಧಿಸುವಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಾಡಿದರು. ಆದರೆ ಇದಕ್ಕೆ ಪೀಠ ನಿರಾಕರಿಸಿತು.

ಪ್ರತಾಪ್‌ ಸಿಂಹ ಪರ ವಕೀಲ ಎಸ್‌ ಸುದರ್ಶನ್‌ ಅವರು “ಬಾನು ಮುಷ್ತಾಕ್‌ ಅವರು ಹಿಂದೂ ಸಂಪ್ರದಾಯ ವಿರೋಧಿ ಮತ್ತು ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಆಯ್ಕೆಯಾದವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡುವುದು ಶಿಷ್ಟಾಚಾರ. ಇದನ್ನು ಪಾಲಿಸಲಾಗಿಲ್ಲ. ಬಾನು ಮುಷ್ತಾಕ್‌ ಅವರಿಗೆ ಅರಿಶಿಣ-ಕುಂಕುಮದ ಮೇಲೆ ನಂಬಿಕೆ ಇಲ್ಲ. ದಸರಾ ಹಿಂದೂ ಹಬ್ಬವಾಗಿದ್ದು, ಜಾತ್ಯತೀತ ಹಬ್ಬವಲ್ಲ” ಎಂದರು.

ಇದಕ್ಕೆ ಪೀಠವು “ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಲು ನಿಮಗೆ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಹಕ್ಕು ಏನಿದೆ ಹೇಳಿ? ಶಿಷ್ಟಾಚಾರ ಪಾಲಿಸುವುದು ಅವರಿಗೆ ಸೇರಿದ ವಿಚಾರ” ಎಂದು ಹೇಳಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

79ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ...