BREAKING NEWS | ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್‌ ನೀರು ಹರಿಸಲು ರಾಜ್ಯಕ್ಕೆ CWMA ಆದೇಶ

Date:

ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಶಿಫಾರಸಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

- Advertisement -

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್‌ನಂತೆ ನೀರು ಹರಿಸಬೇಕು ಎಂದು CWRC ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು CWMA ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪ್ರಾಧಿಕಾರವು CWRC ನೀಡಿದ್ದ ಆದೇಶವನ್ನು ಎತ್ತಿಹಿಡಿದಿದ್ದು ನೀರು ಬಿಡುವಂತೆ ರಾಜ್ಯಕ್ಕೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ದೆಹಲಿಯಲ್ಲಿ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ CWMA ನ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಖುದ್ದಾಗಿ ಭಾಗವಹಿಸಿ ರಾಜ್ಯದ ಜಲಾಶಯಗಳ ನೀರಿನ ಅಭಾವದ ಪರಿಸ್ಥಿತಿಯನ್ನು ವಿವರಿಸಿದರು. ತಮಿಳುನಾಡು ಸರ್ಕಾರದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕಾವೇರಿ ಜಲ ವಿವಾದವು ಮುಖ್ಯವಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ದಶಕಗಳಿಂದ ನಡೆದುಕೊಂಡು ಬಂದಿರುವ ಒಂದು ಪ್ರಮುಖ ಮತ್ತು ಸೂಕ್ಷ್ಮ ಸಂಘರ್ಷವಾಗಿದೆ. ಈ ವಿವಾದದಲ್ಲಿ ಕೇರಳ ಮತ್ತು ಪುದುಚೇರಿ ರಾಜ್ಯಗಳೂ ಸಹ ತಮ್ಮ ಪಾಲನ್ನು ಹೊಂದಿವೆ. ಮಳೆ ಕೊರತೆಯಾದ ವರ್ಷಗಳಲ್ಲಂತೂ ಈ ನೀರಿನ ಹಂಚಿಕೆಯ ಸಮಸ್ಯೆ ಉಲ್ಬಣಗೊಂಡು, ಉಭಯ ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಕಾನೂನು ಹೋರಾಟಗಳಿಗೆ ಕಾರಣವಾಗುತ್ತದೆ.

ಕಾವೇರಿ ವಿವಾದವು 19ನೇ ಶತಮಾನದಲ್ಲೇ ಆರಂಭವಾಯಿತು. ಆಗಿನ ಮೈಸೂರು ಸಂಸ್ಥಾನ ಮತ್ತು ಮದ್ರಾಸ್ ಪ್ರೆಸಿಡೆನ್ಸಿ ನಡುವೆ 1892 ಮತ್ತು 1924ರಲ್ಲಿ ಎರಡು ಪ್ರಮುಖ ಒಪ್ಪಂದಗಳು ನಡೆದಿದ್ದವು. 1924ರ ಒಪ್ಪಂದವು 50 ವರ್ಷಗಳ ಅವಧಿಗೆ ಮಾತ್ರ ಮಾನ್ಯವಾಗಿತ್ತು, ಅದು 1974 ರಲ್ಲಿ ಮುಕ್ತಾಯಗೊಂಡಿತು. ಒಪ್ಪಂದ ಮುಗಿದ ನಂತರ, ಕರ್ನಾಟಕವು ನದಿಯ ನೀರನ್ನು ತನಗೆ ತಕ್ಕಂತೆ ಬಳಸಲು ಮುಂದಾದಾಗ ತಮಿಳುನಾಡು ತಕರಾರು ಎತ್ತಿತು.

ಕೇಂದ್ರ ಸರ್ಕಾರವು 1990ರಲ್ಲಿ ಕಾವೇರಿ ಜಲವಿವಾದ ನ್ಯಾಯಾಧಿಕರಣವನ್ನು ಸ್ಥಾಪಿಸಿತು. ಈ ನ್ಯಾಯಾಧಿಕರಣವು ಸುದೀರ್ಘ ವಿಚಾರಣೆಯ ನಂತರ 2007ರಲ್ಲಿ ತನ್ನ ಅಂತಿಮ ತೀರ್ಪನ್ನು ನೀಡಿತು. ಕಾವೇರಿ ನದಿ ಕೊಳ್ಳದಲ್ಲಿ ಒಟ್ಟು 740 TMC ನೀರು ಲಭ್ಯವಿದೆ ಎಂದು ಅಂದಾಜಿಸಿದ ನ್ಯಾಯಮಂಡಳಿಯು ತಮಿಳುನಾಡಿಗೆ 419 TMC, ಕರ್ನಾಟಕಕ್ಕೆ 270 TMC, ಕೇರಳಕ್ಕೆ 30 TMC, ಪುದುಚೇರಿಗೆ 7 TMC ಮತ್ತು ಪರಿಸರ ಸಂರಕ್ಷಣೆಗಾಗಿ 10 TMC ಕಾಯ್ದಿರಿಸಲಾಯಿತು. ಸಮುದ್ರಕ್ಕೆ ಹರಿದು ಹೋಗುವ ಅನಿವಾರ್ಯ ನೀರು ಎಂದು 4 TMC ಕಾಯ್ದಿರಿಸಲಾಯಿತು. ಅಂದರೆ ಕರ್ನಾಟಕವು ಪ್ರತಿ ವರ್ಷ ಜೂನ್‌ನಿಂದ ಮೇ ತಿಂಗಳ ಅವಧಿಯಲ್ಲಿ ಬಿಳಿಗುಂಡ್ಲು ಮಾಪನ ಕೇಂದ್ರದ ಮೂಲಕ 192 TMC ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಆದೇಶಿಸಿತು.

ಆದರೆ 2007ರ ತೀರ್ಪಿನಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಪರಿಗಣಿಸಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತು. ಸುಪ್ರೀಂ ಕೋರ್ಟ್ 2018 ರಲ್ಲಿ ಐತಿಹಾಸಿಕ ತೀರ್ಪನ್ನು ನೀಡಿತು. ಇದರ ಪ್ರಕಾರ ತಮಿಳುನಾಡಿಗೆ ಹರಿಸಬೇಕಿದ್ದ ನೀರಿನ ಪ್ರಮಾಣವನ್ನು 192 TMC ಇಂದ 177.25 TMC ಗೆ ಕಡಿತಗೊಳಿಸಲಾಯಿತು. ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಪರಿಗಣಿಸಿ ಕರ್ನಾಟಕದ ಪಾಲನ್ನು 14.75 TMC (ಒಟ್ಟು 284.75 TMC) ಹೆಚ್ಚಿಸಿತು.

ಸಾಮಾನ್ಯ ವರ್ಷಗಳಲ್ಲಿ ನೀರಿನ ಹಂಚಿಕೆ ಸುಲಭವಾಗುತ್ತದೆ. ಆದರೆ ಮುಂಗಾರು ಕೈಕೊಟ್ಟು, ಕಾವೇರಿ ಕೊಳ್ಳದ ಜಲಾಶಯಗಳಾದ ಕೆಆರ್‌ಎಸ್‌, ಕಬಿನಿ, ಹೇಮಾವತಿ ಮತ್ತು ಹಾರಂಗಿಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾದಾಗ ಬಿಕ್ಕಟ್ಟು ಸೃಷ್ಟಿಯಾಗುತ್ತದೆ. ಇತ್ತೀಚೆಗೆ ಕಾವೇರಿ ಜಲ ನಿಯಂತ್ರಣ ಸಮಿತಿಯು (CWRC) ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದಾಗಲೆಲ್ಲಾ ಕರ್ನಾಟಕದಲ್ಲಿ ತೀವ್ರ ಪ್ರತಿಭಟನೆಗಳು ಮತ್ತು ಬಂದ್ ನಡೆಸಲಾಗುತ್ತಿದೆ. ಕರ್ನಾಟಕ ಸರ್ಕಾರವು ತನ್ನ ಜನರ ಕುಡಿಯುವ ನೀರು ಮತ್ತು ರೈತರ ಬೆಳೆ ರಕ್ಷಣೆಗೆ ಆದ್ಯತೆ ನೀಡಿ, ಕಾನೂನು ಹೋರಾಟಗಳನ್ನು ಮುಂದುವರಿಸಲು ಸರ್ವಪಕ್ಷ ಸಭೆಗಳನ್ನು ನಡೆಸುತ್ತಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸಿನಂತೆ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ (15 ದಿನಕ್ಕೆ 4 ಟಿಎಂಸಿ) ನೀರು ಬಿಡಲು ರಾಜ್ಯದಲ್ಲಿ ನೀರಿನ ಕೊರತೆಯಿದೆ. ಅದರಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ ರಾಜ್ಯ ಸರ್ಕಾರ ಇಂದು ವಾದ ಮಂಡಿಸಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...