ಧರ್ಮಸ್ಥಳ ಪ್ರಕರಣ | ಸಮೀರ್ ಮನೆಯಲ್ಲಿ ಬೆಳ್ತಂಗಡಿ ಪೊಲೀಸರಿಂದ ಮಹಜರು

Date:

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆಯಲ್ಲಿ ಬೆಳ್ತಂಗಡಿ ಪೊಲೀಸರು ಮಹಜರು ನಡೆಸಿದ್ದಾರೆ.

- Advertisement -

ಎರಡ್ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು ಕೋರ್ಟ್‌ನಿಂದ ಸರ್ಚ್ ವಾರೆಂಟ್ ಪಡೆದುಕೊಂಡಿದ್ದು, ಗುರುವಾರ ಬೆಂಗಳೂರಿನ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಮನೆಗೆ ತೆರಳಿದ್ದಾರೆ. ಧರ್ಮಸ್ಥಳ ಕುರಿತ ವಿಡಿಯೋಗಳನ್ನು ಅವರು ಅದೇ ಮನೆಯಲ್ಲಿ ಚಿತ್ರೀಕರಿಸಿ, ಅಪ್‌ಲೋಡ್‌ ಮಾಡಿದ್ದಾರೆಯೇ ಎಂಬ ಕುರಿತು ಮಹಜರು ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪೊಲೀಸರ ಜೊತೆ ಸೋಕೋ ಟೀಂ ಕೂಡ ತೆರಳಿದೆ. ಈ ಕಾರ್ಯಾಚರಣೆಯು ಧರ್ಮಸ್ಥಳ ಪ್ರಕರಣದಲ್ಲಿ ಸಮೀರ್‌ನ ಪಾತ್ರದ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಿದ್ದಾರೆ ಎಂಬ ಪ್ರಕರಣದ ತನಿಖೆಯ ಭಾಗವಾಗಿದೆ.

ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿಗಳಿವೆ ಎಂಬ ಆರೋಪದೊಂದಿಗೆ ಯೂಟ್ಯೂಬರ್‌ಗಳಾದ ಸಮೀರ್, ಅಭಿಷೇಕ್, ಜಯಂತ್ ಟಿ ಹಾಗೂ ಇತರರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ಈ ವಿಡಿಯೋಗಳು ಧರ್ಮಸ್ಥಳದ ಆಧ್ಯಾತ್ಮಿಕ ಮಹತ್ವವನ್ನು ಕೆಡವುವಂತೆ ಸುಳ್ಳು ಮಾಹಿತಿಯನ್ನು ಹರಡಿದವು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಪೊಲೀಸರು ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಸಮೀರ್ ಎಂಡಿ ಎಂಬ ಯೂಟ್ಯೂಬರ್ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಅವನ ವಿರುದ್ಧ ತನಿಖೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...