ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಮುಂದೂಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Date:

Advertisements

ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವಿಳಂಬವಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ವಾರ್ತಾಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ಬಗ್ಗೆ ಸ್ಪಷ್ಟನೆ ನೀಡಿದರು.

“ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಸಚಿವಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಸಚಿವರಿಗೂ ಸೂಚಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ NWKRTC ಅಧ್ಯಕ್ಷ ಸ್ಥಾನದಿಂದ ವಜಾ

ಸಹಕಾರ ಸಚಿವರಾಗಿದ್ದ ಕೆ ಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ...

ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ಷರತ್ತು ವಿಧಿಸಿ ಸಮೀಕ್ಷೆಗೆ ಅನುಮತಿ

ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ...

BREAKING | ಒಳಮೀಸಲಾತಿ; ಅನ್ಯಾಯ ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ಅಲೆಮಾರಿಗಳು

ಒಳಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಮತ್ತು ಅತಿ ಸೂಕ್ಷ್ಮ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು...

Breaking News | ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ನಿಧನ

ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ಅವರು ವಯೋಸಹಜವಾಗಿ ಬುಧವಾರ ಸಾವನ್ನಪ್ಪಿದ್ದಾರೆ....

Download Eedina App Android / iOS

X