ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ಬಂಗಾಳಿ ನಟಿಯೊಬ್ಬರು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಆಗಸ್ಟ್ 19ರಂದು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬೆನ್ನಲ್ಲೇ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಬಂಗಾಳಿ ನಟಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ರಂಜಿತ್ ವಿರುದ್ಧ ಪ್ರಕರಣವೂ ದಾಖಲಾಗಿದೆ.
ಇದನ್ನು ಓದಿದ್ದೀರಾ? ಮಲಯಾಳಂ ಚಿತ್ರರಂಗದಲ್ಲಿ ಯಾವುದೇ ಶಕ್ತಿ ಕೇಂದ್ರವಿಲ್ಲ: ಮೌನ ಮುರಿದ ನಟ ಮಮ್ಮುಟ್ಟಿ
2009ರಲ್ಲಿ ‘ಪಲೇರಿಮಾಣಿಕ್ಯಂ’ ಚಿತ್ರದ ಬಗ್ಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ನಟಿಗೆ ಕಿರುಕುಳ ನೀಡಲು ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಯತ್ನಿಸಿದ್ದ ಆರೋಪವನ್ನು ಹೊತ್ತಿದ್ದಾರೆ.
ಆ ಸಮಯದಲ್ಲಿ ಹಲವಾರು ಸವಾಲುಗಳು ನನ್ನ ಮುಂದಿತ್ತು, ಬೆಂಬಲವೂ ಸಿಕ್ಕಿಲ್ಲ. ಆದ್ದರಿಂದ ದೂರು ದಾಖಲಿಸುವ ಧೈರ್ಯ ಇರಲಿಲ್ಲ ಎಂದು ನಟಿ ಹೇಳಿದ್ದಾರೆ.
ರಂಜಿತ್ ಈ ಆರೋಪಗಳನ್ನು ನಿರಾಕರಿಸಿದ್ದು, ಇದು ತನ್ನ ವಿರುದ್ಧ ದೊಡ್ಡ ಪಿತೂರಿಯ ಭಾಗವೆಂದು ಹೇಳಿದ್ದಾರೆ. ನಟಿಯ ವಿರುದ್ಧ ತಾನೇ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ರಂಜಿತ್ ವಿರುದ್ಧ ದೂರು ದಾಖಲಿಸಿದ್ದು ಇದೀಗ ರಂಜಿತ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
[BREAKING] Film Director Ranjith moves Kerala High Court for anticipatory bail in sexual harassment case
— Bar and Bench (@barandbench) September 3, 2024
report by @GitiPratap https://t.co/02t6GgFn5t
