ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದಾರೆ. ನಟ ದರ್ಶನ್ ಬೇಡಿಕೆ ಕೇಳಿದ ಜಡ್ಜ್ ಕೂಡ ಆಶ್ಚರ್ಯ ಪಟ್ಟಿದ್ದಾರೆ.
ವಿಷ ಕೇಳಿದ ದರ್ಶನ್‌ಗೆ ಹಾಗೆಲ್ಲಾ ಕೇಳದಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಜೈಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ಮಧ್ಯಾಹ್ನ ನೀಡುವುದಾಗಿ ನ್ಯಾಯಾಧೀಶರು ಇದೇ ವೇಳೆ ಹೇಳಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ. ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್ಗೆ ಶಾಕ್ ತಂದಿದೆ. ಮಧ್ಯಾಹ್ನದ ವಿಚಾರಣೆಯಲ್ಲಿ ತಲೆದಿಂಬು, ಹಾಸಿಗೆ ಕೋರಿದ್ದ ದರ್ಶನ್ ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ನೀಡಲಿದೆ.
ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಂಬಂಧ ನ್ಯಾಯಾಲಯದ ಅನುಮತಿ ಕೋರಿ ಜೈಲು ಪ್ರಾಧಿಕಾರವು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಹ ಇಂದು ನ್ಯಾಯಾಲಯ ತೀರ್ಪು ನೀಡಲಿದೆ.
ವಿಷ ನೀಡುವಂತೆ ಕೋರಿದ ದರ್ಶನ್:
— ಬಾರ್ & ಬೆಂಚ್ – Kannada Bar & Bench (@Kbarandbench) September 9, 2025
ಜೈಲಿನಲ್ಲಿರುವ ನಟ ದರ್ಶನ್ ಅವರಿಂದ ತನಗೆ ವಿಷ ಕೊಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ನ್ಯಾಯಾಧೀಶರಲ್ಲಿ ಮನವಿ. ಜೈಲಿನಿಂದ ಹೊರಗೆ ತಮ್ಮನ್ನು ಬಿಡುತ್ತಿಲ್ಲ, ಬಿಸಿಲನ್ನೂ ನೋಡದಂತಾಗಿದೆ. ಫಂಗಸ್ ಸಮಸ್ಯೆ ಶುರವಾಗಿದೆ ಎಂದು ಅಲವತ್ತುಕೊಂಡ ದರ್ಶನ್.
#renukaswamycase #darshan pic.twitter.com/nSHbFrvN1l