ಬಿಸಿಲು ನೋಡಿ 30 ದಿನವಾಗಿದೆ, ನನಗೆ ವಿಷ ಕೊಟ್ಟು ಬಿಡಿ: ನ್ಯಾಯಾಧೀಶರ ಮುಂದೆ ನಟ ದರ್ಶನ್ ಮನವಿ

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದಾರೆ. ನಟ ದರ್ಶನ್ ಬೇಡಿಕೆ ಕೇಳಿದ ಜಡ್ಜ್ ಕೂಡ ಆಶ್ಚರ್ಯ ಪಟ್ಟಿದ್ದಾರೆ.

- Advertisement -

ವಿಷ ಕೇಳಿದ ದರ್ಶನ್‌ಗೆ ಹಾಗೆಲ್ಲಾ ಕೇಳದಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಜೈಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ಮಧ್ಯಾಹ್ನ ನೀಡುವುದಾಗಿ ನ್ಯಾಯಾಧೀಶರು ಇದೇ ವೇಳೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ. ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್​ಗೆ ಶಾಕ್ ತಂದಿದೆ. ಮಧ್ಯಾಹ್ನದ ವಿಚಾರಣೆಯಲ್ಲಿ ತಲೆದಿಂಬು, ಹಾಸಿಗೆ ಕೋರಿದ್ದ ದರ್ಶನ್‌ ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ನೀಡಲಿದೆ.

ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಂಬಂಧ ನ್ಯಾಯಾಲಯದ ಅನುಮತಿ ಕೋರಿ ಜೈಲು ಪ್ರಾಧಿಕಾರವು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಹ ಇಂದು ನ್ಯಾಯಾಲಯ ತೀರ್ಪು ನೀಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

IRCTC ಪ್ರಕರಣ: ಲಾಲು ಪ್ರಸಾದ್ ಯಾದವ್, ತೇಜಸ್ವಿ, ರಾಬ್ರಿ ದೇವಿ ವಿರುದ್ಧ ದೋಷಾರೋಪ ಹೊರಿಸಿದ ದೆಹಲಿ ಕೋರ್ಟ್

ಐಆರ್‌ಸಿಟಿಸಿ ಹೋಟೆಲ್ ಗುತ್ತಿಗೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (ಮನಿ...

BREAKING NEWS: ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಮಹಿಳೆಯರಿಗಿಲ್ಲ ಪ್ರಾತಿನಿಧ್ಯ

ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಕರ್ನಾಟಕದ ನೂತನ ಜಿಲ್ಲಾ ಕಾಂಗ್ರೆಸ್...

KPSC ನೇಮಕಾತಿ ಅಕ್ರಮ: ಶಿವಶಂಕರಪ್ಪಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್‌ ನಕಾರ; ಬಂಧನ ಸಾಧ್ಯತೆ

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ...

BREAKING NEWS | ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು ಎಸ್ಐಆರ್ ಸಂತ್ರಸ್ತರ ಬಂಧನ

ಕರ್ನಾಟಕ ರಾಜ್ಯದ ಅರ್ಹ ಮತದಾರರ 'ಮತಹರಣ' ಖಂಡಿಸಿ ಎಸ್ಐಆರ್ ವಿರೋಧಿ ಒಕ್ಕೂಟ...