ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನ 5, ಬಿಜೆಪಿಯ 2 ಅಭ್ಯರ್ಥಿಗಳಿಗೂ ಜಯ, ಜೆಡಿಎಸ್‌ಗೆ ಸೋಲು

Date:

ರಾಜ್ಯ ವಿಧಾನ ಪರಿಷತ್‌ಗೆ ಇಂದು ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷ ತನ್ನ ಐದು ಅಭ್ಯರ್ಥಿಗಳನ್ನು ಅಧಿಕೃತವಾಗಿ ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಿಜೆಪಿಯ ಇಬ್ಬರು ಗೆಲುವು ಸಾಧಿಸಿದ್ದಾರೆ. ಮೈತ್ರಿಕೂಟದ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರು ಸೋಲು ಕಂಡಿದ್ದಾರೆ.

- Advertisement -

ಕಾಂಗ್ರೆಸ್‌ನಿಂದ ಬಿ ಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಾಮಕನೂರ್, ಪಿ ವಿ ಮೋಹನ್ ಮತ್ತು ಶಿವಣ್ಣ ಮಳವಳ್ಳಿ, ವಿನಯ್ ಕಾರ್ತಿಕ್ ಗೆಲುವು ಸಾಧಿಸಿದ್ದರೆ, ಬಿಜೆಪಿಯಿಂದ – ರಘು ಕೌಟಿಲ್ಯ ಮತ್ತು ಲಿಂಗರಾಜ್ ಪಾಟೀಲ್ ಪರಿಷತ್‌ ಸದಸ್ಯರಾಗಿ ಆಯ್ಕೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಿರೋಧ ಪಕ್ಷಗಳ ಪಾಳಯದಲ್ಲಿ ನಡೆದಿರುವ ಭಾರೀ ಪ್ರಮಾಣದ ಅಡ್ಡಮತದಾನ ಕಾಂಗ್ರೆಸ್‌ನ ಲಾಭವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಹಲವು ಶಾಸಕರು ತಮ್ಮ ಪಕ್ಷದ ಅಧಿಕೃತ ಸೂಚನೆಯನ್ನು ಧಿಕ್ಕರಿಸಿ, ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಅಡ್ಡಮತದಾನ ಮಾಡಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರ ಪರಾಭವವು ಮೈತ್ರಿಕೂಟದ ಲೆಕ್ಕಾಚಾರವನ್ನು ಸಂಪೂರ್ಣವಾಗಿ ತಲೆಕೆಳಗಾಗಿಸಿದೆ. ಬಿಜೆಪಿ ಜೊತೆಗಿನ ಭದ್ರ ಮೈತ್ರಿಯ ಹೊರತಾಗಿಯೂ, ತಮ್ಮದೇ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಉಭಯ ಪಕ್ಷಗಳ ನಾಯಕರು ವಿಫಲರಾಗಿದ್ದಾರೆ. ಮೈತ್ರಿಕೂಟದ ಒಗ್ಗಟ್ಟಿನ ಕೊರತೆಯನ್ನು ಎತ್ತಿತೋರಿಸಿದೆ. ಗೋವಿಂದರಾಜು ಅವರಿಗೆ ತಮ್ಮವರೇ ಕೈಕೊಟ್ಟ ಹಿನ್ನೆಲೆಯಲ್ಲಿ ಈ ಅನಿರೀಕ್ಷಿತ ಸೋಲು ಎದುರಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ʼಈದಿನʼ ವರದಿ ಫಲಶೃತಿ : ದುರಸ್ತಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...