ಪೋಕ್ಸೊ ಪ್ರಕರಣ: ವಚನಾನಂದ ಸ್ವಾಮೀಜಿಯ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್

Date:

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

- Advertisement -

ಸ್ವಾಮೀಜಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪೋಕ್ಸೊ ಕಾಯ್ದೆಯಡಿ ದೂರು ನೀಡಿದ ಕಾರಣಕ್ಕಾಗಿ ಸಂತ್ರಸ್ತ ಬಾಲಕನ ಕುಟುಂಬಕ್ಕೆ ಸ್ವಾಮೀಜಿ ಕಡೆಯಿಂದ ಬೆದರಿಕೆ ಬಂದಿದೆ ಎಂದು ದೂರುದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿ: ಪೋಕ್ಸೊ ಪ್ರಕರಣ | ಹೈಕೋರ್ಟ್‌ನಿಂದ ಯಡಿಯೂರಪ್ಪ ವಿಚಾರಣೆ, ಸುಪ್ರೀಂ ಕೋರ್ಟ್‌ ತಡೆ

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಬಾಲಕನ ಮೇಲೆ ಲೈಂಗಿಕ ದೌರ್ಜನ್ಯದಂತಹ ಗಂಭೀರ ಆರೋಪದಲ್ಲಿ ಎಫ್‌ಐಆರ್ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ಕೆಳ ನ್ಯಾಯಾಲಯ ವಿಧಾನದ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹಾಗೆಯೇ ನಿರೀಕ್ಷಣಾ ಜಾಮೀನು ರದ್ದುಪಡಿಸಿದೆ.

ಆದರೂ ಸ್ವಾಮೀಜಿಗೆ ನಿಯಮಿತ (ರೆಗ್ಯುಲರ್) ಜಾಮೀನು ಕೋರಲು ಹೈಕೋರ್ಟ್ 3 ವಾರಗಳ ಕಾಲಾವಕಾಶ ನೀಡಿದೆ. ಅಲ್ಲಿಯವರೆಗೆ ಅವರನ್ನು ಬಂಧಿಸದಂತೆ ರಕ್ಷಣೆ ನೀಡಲಾಗಿದೆ. ಸ್ವಾಮೀಜಿ ತಮಗೆ ನೀಡಿರುವ ಸಮಯದೊಳಗೆ ಸಕ್ಷಮ ನ್ಯಾಯಾಲಯದಲ್ಲಿ ಹೊಸದಾಗಿ ನಿಯಮಿತ ಜಾಮೀನು ಅರ್ಜಿ ಸಲ್ಲಿಸಿ ಜಾಮೀನು ಪಡೆದುಕೊಳ್ಳಬಹುದು ಎಂದು ಪೀಠವು ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...