BREAKING NEWS | ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ

Date:

Advertisements

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ರಾಜ್ಯದಲ್ಲಿ ಶೇಕಡ 66.14 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಶೇಕಡ 8ರಷ್ಟು ಫಲಿತಾಂಶ ಹೆಚ್ಚಳವಾಗಿದೆ. 22 ವಿದ್ಯಾರ್ಥಿಗಳು 625ಕ್ಕೆ 625 ಅಂಕವನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ, ಎರಡನೇ ಸ್ಥಾನವನ್ನು ಉಡುಪಿ ಪಡೆದಿದೆ.

ಇದನ್ನು ಓದಿದ್ದೀರಾ? ಸಿಬಿಎಸ್‌ಸಿ 10 ಮತ್ತು 12 ನೇ ತರಗತಿ ಫಲಿತಾಂಶ ಪ್ರಕಟ

Advertisements

ದಕ್ಷಿಣ ಕನ್ನಡ ಜಿಲ್ಲೆ (ಶೇ.91.12), ಉಡುಪಿ ಜಿಲ್ಲೆ (ಶೇ.89.96), ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಸ್ಥಾನ ಪಡೆದಿವೆ. ಕೊನೆಯ ಸ್ಥಾನವನ್ನು ಕಲಬುರಗಿ ಪಡೆದಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಜಾನ್ಹವಿ, ಧನಲಕ್ಷ್ಮೀ ಟಾಪರ್‌ಗಳಾಗಿದ್ದಾರೆ. ಒಟ್ಟು 22 ವಿದ್ಯಾರ್ಥಿಗಳು ಟಾಪರ್ಸ್‌ಗಳಾಗಿದ್ದಾರೆ.

ಈ ಬಾರಿ ಶೇಕಡ 74 ಹೆಣ್ಣುಮಕ್ಕಳು ಉತ್ತೀರ್ಣರಾದರೆ, ಶೇಕಡ 58.07 ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು...

BREAKING NEWS | ಬೆಂಗಳೂರಿನಲ್ಲಿ ಸ್ಫೋಟ: ಬಾಲಕ ಸಾವು; 10ಕ್ಕೂ ಅಧಿಕ ಮನೆಗೆ ಹಾನಿ

ಬೆಂಗಳೂರು ನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ...

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ವಿಧಿವಶ

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ (90)...

Download Eedina App Android / iOS

X