BREAKING NEWS | ಸೌಜನ್ಯ ಪ್ರಕರಣ: ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ಸೂಚನೆ

Date:

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಈ ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಸೂಚಿಸಿದೆ.

- Advertisement -

ಈ ಪ್ರಕರಣದ ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. ಈ ಹಿಂದೆ ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಇದನ್ನು ಓದಿದ್ದೀರಾ? BREAKING NEWS | ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್‌

ಇಂದು ವಿಚಾರಣೆಯನ್ನು ಮುಂದುವರೆಸಿದ್ದು, ಸೌಜನ್ಯ ತಾಯಿ ಪರ ವಕೀಲರು ಸಿಬಿಐ ಮತ್ತು ಪೊಲೀಸ್ ಇಲಾಖೆಯ ನಿರ್ಲಕ್ಷ್ಯವನ್ನು ನ್ಯಾಯಮೂರ್ತಿಗಳಿಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂತೋಷ್ ರಾವ್ ಪರ ವಕೀಲರೂ ಸುಪ್ರೀಂ ಕೋರ್ಟ್‌ನಲ್ಲಿ ಹಾಜರಿದ್ದರು. ಆದರೆ ಸಿಬಿಐ ಮತ್ತು ರಾಜ್ಯ ಸರ್ಕಾರದ ಪರ ವಕೀಲರು ಗೈರಾಗಿದ್ದರು ಎಂದು ತಿಳಿದುಬಂದಿದೆ.

ವಾದ ಆಲಿಸಿದ ಸುಪ್ರೀಂ ಕೋರ್ಟ್ ಸೌಜನ್ಯ ಪ್ರಕರಣದ ಎಲ್ಲ ಸಾಕ್ಷಿಗಳಿಗೆ ತಕ್ಷಣದಿಂದ ರಕ್ಷಣೆ ನೀಡಬೇಕು. ಈ ಹಿಂದೆ ಹಲವು ಸಾಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸಾಕ್ಷಿಗಳಿಗೆ ಕೂಡಲೇ ರಕ್ಷಣೆ ನೀಡಲು ಸೂಚಿಸಿದೆ.

ಜತೆಗೆ ಮರು ತನಿಖೆ ಸಂಬಂಧ ತಮ್ಮ ನಿಲುವನ್ನು ಸಿಬಿಐ ಮತ್ತು ರಾಜ್ಯ ಸರ್ಕಾರ ಲಿಖಿತ ರೂಪದಲ್ಲಿ ನೀಡಲು ಎರಡು ವಾರಗಳ ಗಡುವನ್ನು ಸುಪ್ರೀಂ ಕೋರ್ಟ್ ನೀಡಿದೆ. ಹಾಗೆಯೇ ಮರುತನಿಖೆಯನ್ನು ಯಾವ ಸಂಸ್ಥೆ ನಡೆಸಬಹುದು ಎಂಬುದನ್ನು ತಿಳಿಸಬೇಕು ಎಂದು ಹೇಳಿದೆ.

ಇನ್ನು ಈ ಸಂದರ್ಭದಲ್ಲೇ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಮೂರ್ತಿಗಳು, “ಇಂತಹ ಗಂಭೀರ ಪ್ರಕರಣದಲ್ಲಿ ನೀವು ಇಷ್ಟೊಂದು ನಿರಾಸಕ್ತಿ ತೋರುವುದು ಸರಿಯಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ

2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಧರ್ಮಸ್ಥಳದ ಬಳಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಮರುದಿನ ಆಕೆಯ ಮೃತದೇಹ ನೇತ್ರಾವತಿ ಸ್ನಾನಘಟ್ಟದ ಬಳಿಯ ಪೊದೆಯಲ್ಲಿ ಸಿಕ್ಕಿತ್ತು.

ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಮಾತ್ರವಲ್ಲದೆ ದೇಶದ ಹಲವು ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ವೇಳೆಯೇ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕೊಲೆ, ನಿಗೂಢ ಸಾವು, ನಾಪತ್ತೆ ಪ್ರಕರಣಗಳು ಮುನ್ನೆಲೆಗೆ ಬಂದಿತ್ತು.

ಇದನ್ನು ಓದಿದ್ದೀರಾ? ಹೋರಾಟಕ್ಕೆ ಗೌರವ, ಬೆಂಬಲ: ಸೌಜನ್ಯ ತಾಯಿ ಕುಸುಮಾವತಿಗೆ ಪತ್ರ ಬರೆದ ‘ಕೊಂದವರು ಯಾರು’ ತಂಡ

ಸೌಜನ್ಯ ಪ್ರಕರಣವನ್ನು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ನಂತರ 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಈ ನಡುವೆ ಪ್ರಕರಣದ ಸಾಕ್ಷಿಯಾಗಿದ್ದ ರವಿ ಪೂಜಾರಿ ಎಂಬುವವರು ನಿಗೂಢವಾಗಿ ಸಾವನ್ನಪ್ಪಿದ್ದರು. ಸೌಜನ್ಯ ಅತ್ಯಾಚಾರ ಕೊಲೆ ನಡೆದ ಎರಡು ದಿನದಲ್ಲೇ ಸಂತೋಷ್ ರಾವ್ ಎಂಬಾತನ ಬಂಧನ ಮಾಡಲಾಗಿತ್ತು. ಸುಮಾರು 11 ವರ್ಷಗಳ ಕಾಲ ಸಂತೋಷ್ ಜೈಲಿನಲ್ಲಿದ್ದರು.

ಆದರೆ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ ಸಂತೋಷ್‌ ಅವರು 2023ರಲ್ಲಿ ಸಂತೋಷ ರಾವ್‌ ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಇವಿಷ್ಟು ನಡೆಯುತ್ತಿದ್ದಂತೆ ನಿಜಕ್ಕೂ ಈ ನೀಚ ಕೃತ್ಯವನ್ನು ಎಸಗಿದವರು ಯಾರು ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ. ಸೌಜನ್ಯ ತಾಯಿ ನ್ಯಾಯಕ್ಕಾಗಿ ಕಾನೂನು ಹೋರಾಟ ಮುಂದುವರೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಮೊಬೈಲ್ ಒಡೆದು ಹಾಕಿ’: ‘ಡಿಜಿಟಲ್ ಅರೆಸ್ಟ್’ ಬಲೆಗೆ ಬೀಳುತ್ತಿರುವ ಸುಶಿಕ್ಷಿತರ ಬಗ್ಗೆ ಸುಪ್ರೀಂ ಬೇಸರ

ದೇಶಾದ್ಯಂತ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳ ಕುರಿತು ತೀವ್ರ...

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...

ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ...