ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಶುಕ್ರವಾರ ಕೋಲ್ಕತ್ತದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಒಮ್ಮತದಿಂದ ಸುವೇಂದು ಅಧಿಕಾರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಶೀಘ್ರದಲ್ಲೇ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇದನ್ನು ಓದಿದ್ದೀರಾ? ತಮಿಳುನಾಡಿನಲ್ಲಿ ತುಮಕೂರು ಮೂಲದ ಕನ್ನಡಿಗನ ಜಯಭೇರಿ; ಟಿವಿಕೆ ಪಕ್ಷದಿಂದ ಸುನಿಲ್ ಆನಂದ್ ಶಾಸಕ
ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಾ ಬಂದಿರುವ ಸುವೇಂದು ಅಧಿಕಾರಿ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಸಂಘಟನೆ ಮತ್ತು ಪಕ್ಷವನ್ನು ಅಧಿಕಾರದ ಗದ್ದುಗೆಗೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.




