ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್

Date:

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್‌ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ ಅವರು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತನ್ನ ದೂರು ದಾಖಲಾಗುತ್ತಿದ್ದಂತೆ ಗೋಪಾಲ್‌ ಜೋಶಿ ತಲೆಮರೆಸಿಕೊಂಡಿದ್ದರು. ಬೆಂಗಳೂರು ಪೊಲೀಸರು ಗೋಪಾಲ್‌ ಜೋಶಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

”ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹಣ ಮತ್ತು ಚೆಕ್‌ಅನ್ನು ವಾಪಸ್ ಕೇಳಲು ಹೋದಾಗ, ಚೆಕ್‌ಅನ್ನು ಮಾತ್ರವೇ ಹಿಂದಿರುಗಿಸಿದರು. ಅಲ್ಲದೆ, ಸರ್ಕಾರದಿಂದ 200 ಕೋಟಿ ರೂ. ಮೌಲ್ಯದ ಪ್ರಾಜೆಕ್ಟ್‌ ಸಿಗಲಿದೆ. ಆಗ ಎಲ್ಲ ಹಣವನ್ನೂ ಹಿಂದಿರುಗಿಸುತ್ತೇನೆ. ಅದಕ್ಕಾಗಿ, 1.75 ಕೋಟಿ ರೂ. ಹಣದ ಅಗತ್ಯವಿದೆ. ಸಹಾಯ ಮಾಡಿ – 25 ದಿನಗಳೊಳಗೆ ಹಿಂದಿರುಗಿಸುತ್ತೇನೆಂದು ಗೋಪಾಲ್ ಜೋಶಿ ಕೇಳಿದ್ದರು. ಆ ಹಣವನ್ನು ನಾವು ಹೊಂದಿಸಿ ಕೊಟ್ಟೆವು. ಆದರೆ, ಹಲವಾರು ದಿನಗಳು ಕಳೆದರೂ ಹಣವನ್ನು ಹಿಂದಿರುಗಿಸಲಿಲ್ಲ. ಅದನ್ನು ಕೇಳಲು ಹೋಗಿದ್ದಕ್ಕೆ, ಗೋಪಾಲ್ ಜೋಶಿ ಅವರ ಸಹೋದರಿ ವಿಜಯಲಕ್ಷ್ಮಿ ಜೋಶಿ ಅವರು ನಮ್ಮನ್ನು ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೆ, ಗೂಂಡಾಗಳನ್ನು ಕರೆಸಿ, ಬೆದರಿಕೆ ಹಾಕಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ.

ಸುನೀತಾ ಚವ್ಹಾಣ್ ಅವರ ದೂರಿನ ಆಧಾರದ ಮೇಲೆ, ಗೋಪಾಲ್ ಜೋಶಿ, ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಮೂವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 126(2), 118(1), 316(2), 318(4), 61-3(5) ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

79ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ...