ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

Date:

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಕುರಿತು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಬುಧವಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.

- Advertisement -

“ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ದಶಕಗಳ ಕಾಲ ತಮ್ಮ ಅದ್ಭುತ ನಟನೆಯ ಸುದೀರ್ಘ ಪಯಣದ ಮೂಲಕ ತಲೆಮಾರುಗಳನ್ನು ಪ್ರೇರೇಪಿಸಿದ ನಟ ಅನಂತ್ ನಾಗ್ ಅವರಿಗೆ ಈ ಅತ್ಯುನ್ನತ ಗೌರವವನ್ನು ಪ್ರದಾನ ಮಾಡಲು ಭಾರತ ಸರ್ಕಾರ ಹರ್ಷಿಸುತ್ತದೆ” ಎಂದು ಪಿಐಬಿ ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಸೆಪ್ಟೆಂಬರ್ 22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಭಾರತೀಯ ಚಲನಚಿತ್ರರಂಗದ ಅತ್ಯುನ್ನತ ಗೌರವವಾಗಿದ್ದು, ಚಿತ್ರರಂಗದ ಬೆಳವಣಿಗೆ ಮತ್ತು ವಿಕಾಸಕ್ಕೆ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ಮುಂಬೈ ರಂಗಭೂಮಿಯ ಹಿನ್ನೆಲೆಯಿಂದ ಬಂದ ಅನಂತ್ ನಾಗ್, ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಮತ್ತು ಮರಾಠಿ ಚಿತ್ರರಂಗದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ನಾಟಕಗಳಲ್ಲಿ ಅಭಿನಯಿಸುತ್ತಿದ್ದ ಇವರನ್ನು ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರು ಗುರುತಿಸಿ ‘ಅಂಕುರ್’, ‘ನಿಶಾಂತ್’ ಮತ್ತು ‘ಮಂಥನ್’ ನಂತಹ ಹಿಂದಿಯ ಕಲಾತ್ಮಕ ಹಾಗೂ ಸಮಾಜಮುಖಿ ಚಿತ್ರಗಳಲ್ಲಿ ಅವಕಾಶ ನೀಡಿದರು.

ಜಿ.ವಿ. ಅಯ್ಯರ್ ನಿರ್ದೇಶನದ ‘ಹಂಸಗೀತೆ’ ಚಿತ್ರದ ಮೂಲಕ ಕನ್ನಡ ಬೆಳ್ಳಿತೆರೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದ ಅವರು, ನಂತರ ದೊರೈ-ಭಗವಾನ್ ನಿರ್ದೇಶನದ ಸಾಲು ಸಾಲು ಕಾದಂಬರಿ ಆಧಾರಿತ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನೆಮಾತಾದರು. ‘ಚಂದನದ ಗೊಂಬೆ’, ‘ನಾ ನಿನ್ನ ಬಿಡಲಾರೆ’, ‘ಬೆಂಕಿಯ ಬಲೆ’ಯಂತಹ ಚಿತ್ರಗಳು ಅವರನ್ನು ಸೂಪರ್ ಸ್ಟಾರ್ ಆಗಿ ಬೆಳೆಸಿದವು. ತಮ್ಮ ಸಹೋದರ, ದಿವಂಗತ ಶಂಕರ್ ನಾಗ್ ಅವರೊಂದಿಗೆ ಸೇರಿ ‘ಮಿಂಚಿನ ಓಟ’, ‘ಆಕ್ಸಿಡೆಂಟ್’ ಮುಂತಾದ ಪ್ರಯೋಗಾತ್ಮಕ ಚಿತ್ರಗಳನ್ನು ನೀಡುವುದರ ಜೊತೆಗೆ, ವಿಶ್ವಾದ್ಯಂತ ಜನಪ್ರಿಯವಾದ ‘ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲೂ ಅವರು ಅಭಿನಯಿಸಿದ್ದರು.

ಇತ್ತೀಚಿನ ವರ್ಷಗಳಲ್ಲಿ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕೆಜಿಎಫ್’ ಹಾಗೂ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಚಿತ್ರಗಳಲ್ಲಿನ ಅವರ ಪಾತ್ರಗಳು ಯುವ ಪೀಳಿಗೆಯನ್ನೂ ದೊಡ್ಡ ಮಟ್ಟದಲ್ಲಿ ಸೆಳೆದಿವೆ.

ಚಿತ್ರರಂಗದ ಜೊತೆಗೆ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದರು. ಜನತಾ ದಳದೊಂದಿಗೆ ಗುರುತಿಸಿಕೊಂಡಿದ್ದ ಅವರು, ಜೆ.ಎಚ್. ಪಟೇಲ್ ಅವರ ನೇತೃತ್ವದ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಆದರೆ, ಈ ಅತ್ಯುನ್ನತ ಪುರಸ್ಕಾರದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ವಲಯಗಳಲ್ಲಿ ಭಿನ್ನಾಭಿಪ್ರಾಯಗಳೂ ವ್ಯಕ್ತವಾಗಿವೆ. ಇತ್ತೀಚಿನ ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಿದ್ಧಾಂತಗಳ ಪರವಾಗಿ ಅನಂತ್ ನಾಗ್ ಅವರು ಬಹಿರಂಗವಾಗಿ ಹೊಂದಿರುವ ಒಲವು ಮತ್ತು ನೀಡುತ್ತಿರುವ ಬೆಂಬಲವೇ ಅವರಿಗೆ ಈ ಎಲ್ಲಾ ಪ್ರಶಸ್ತಿಗಳು ಒಲಿಯಲು ಮುಖ್ಯ ಕಾರಣ ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಹಬ್ಬ-ಆಚರಣೆಗಳೇ ಬಿಜೆಪಿಯ ದ್ವೇಷದ ಅಸ್ತ್ರ; ಜನತೆ ಎಚ್ಚೆತ್ತುಕೊಳ್ಳಲಿ!

ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಧಾರ್ಮಿಕ ಆಚರಣೆಗಳ ಪಾವಿತ್ರ್ಯವನ್ನು ಹಾಳುಗೆಡವುವ, ಹಬ್ಬಗಳನ್ನು...

ಸುದ್ದಿ ನೋಡಿದ ತಕ್ಷಣ ಪಿಐಎಲ್ ಹಾಕ್ತೀರಾ? – ನಕಲಿ ವೈದ್ಯಕೀಯ ಪದವಿ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ಚರ್ಚೆಯಾಗುವ ಸುದ್ದಿಗಳ ಆಧಾರದ ನಿಯಮಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌)...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...