ಧಾರವಾಡ

ಧಾರವಾಡದ ʼಮನ್ಸೂರ ಕಲಾಭವನʼ; ಕಲೆಗಾಗಿ ಕಟ್ಟಿದ ಕಟ್ಟಡ ಈಗ ಕಸದ ಗೋದಾಮು!

ಧಾರವಾಡದ ಕಡಪಾ ಮೈದಾನದಲ್ಲಿರುವ ಡಾ. ಮಲ್ಲಿಕಾರ್ಜುನ ಮನ್ಸೂರ ಕಲಾಭವನವು ಇಂದಿಗೆ ನಿರ್ಲಕ್ಷ್ಯಕ್ಕೆ ಒಳಗಾಗಿ ತೀರಾ ದಯನೀಯ ಸ್ಥಿತಿ ತಲುಪಿದೆ. ಸುಮಾರು 20 ವರ್ಷಗಳಿಂದ ಈ ಭವನದಲ್ಲಿ ಯಾವುದೇ ಸಭೆ, ಸಮಾರಂಭ ಅಥವಾ ಸಾಂಸ್ಕೃತಿಕ...

ಧಾರವಾಡ | ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ; ಮೂಲ ಸೌಕರ್ಯಗಳಿಲ್ಲದೆ ಬಳಲುತ್ತಿರುವ ಜನ್ನತ್ ನಗರ

ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ವ್ಯಾಪ್ತಿಗೆ ಬರುವ ಜನ್ನತ್ ನಗರದ ನಿವಾಸಿಗಳು ಕಳೆದ ಹಲವು ವರ್ಷಗಳಿಂದ ಮೂಲ ಸೌಕರ್ಯಗಳ ಅಭಾವದಲ್ಲಿ ನರಳುತ್ತಿದ್ದಾರೆ. ನೀರು, ರಸ್ತೆ, ಒಳಚರಂಡಿ, ವಿದ್ಯುತ್, ಕಸ...

ಧಾರವಾಡ | ಯರಗುಪ್ಪಿಯಲ್ಲಿ ಸಿಲಿಂಡರ್ ಸ್ಪೋಟ; 6 ಲಕ್ಷ ಮೌಲ್ಯದ ಹೋಟೆಲ್ ಸಾಮಗ್ರಿ ಸುಟ್ಟು ಭಸ್ಮ​

ಧಾರವಾಡದ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಧ್ಯರಾತ್ರಿ ವಾಣಿಜ್ಯ ಬಳಕೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಭಾರೀ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ​ಯರಗುಪ್ಪಿ...

ಧಾರವಾಡ | ಸೆ.22ರಿಂದ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಕ್ರಿಯೆ ಆರಂಭಗೊಂಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಜನರಲ್ಲಿನ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವ...

ಧಾರವಾಡ | ವನ ಸಂರಕ್ಷಣೆಯ ಹೊಣೆ ಪ್ರತಿಯೊಬ್ಬರ ಮೇಲಿದೆ: ಸಚಿವ ಈಶ್ವರ ಖಂಡ್ರೆ

ಸಂವಿಧಾನದ ಆಶಯದಂತೆ ವನ ಸಂರಕ್ಷಣೆ ಮಾಡುವ ಹೊಣೆ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. ಧಾರವಾಡದಲ್ಲಿ 2025ನೇ ಸಾಲಿನ ಅರಣ್ಯ ಕ್ರೀಡಾಕೂಟ ಉದ್ಘಾಟಿಸಿ...

ಧಾರವಾಡ | ಮಧ್ಯಂತರ ಬೆಳೆ ವಿಮೆ & ಸಾಲಮನ್ನಾಕ್ಕೆ ರೈತರ ಆಗ್ರಹ

ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಸಾವಿರಾರು ಎಕರೆಗಳಲ್ಲಿ ಬೆಳೆದ ಬೆಳೆ ನಾಶವಾಗಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಮಧ್ಯಂತರ ಬೆಳೆ ವಿಮೆ ಬಿಡುಗಡೆ ಮಾಡಲು ಹಾಗೂ ರೈತರ ಸಾಲ ಮನ್ನಾ ಮಾಡಬೇಕೆಂದು...

ಧಾರವಾಡ | ಬಸವ ಸಂಸ್ಕೃತಿ ಅಭಿಯಾನ ಯಾರ ವಿರುದ್ಧವೂ ಅಲ್ಲ: ಬಸವಪರ ಸಂಘಟನೆಗಳ ಸ್ಪಷ್ಟನೆ

ಯಾರೇ ವಿರೋಧಿಸಿದರೂ ಬಸವ ಸಂಸ್ಜೃತಿ ಉತ್ಸವ ನಡೆಯುತ್ತದೆ. ವಿಶ್ವಗುರು ಬಸವಣ್ಣನವರ ಸಲುವಾಗಿ ಈ ಅಭಿಯಾನ ನಡೆಯುತ್ತಿದೆಯೇ ಹೊರತು ಯಾವುದೇ ರಾಜಕಾರಣಿ ಅಥವಾ ಸ್ವಾಮಿಗಳ ಸಲುವಾಗಿ ಅಲ್ಲ ಅಥವಾ ಯಾರ ವಿರುದ್ಧವೂ ಅಲ್ಲ ಎಂದು...

ಧಾರವಾಡ | ಬೆಳೆ ಹಾನಿ ಪರಿಹಾರಕ್ಕೆ ಕ್ರಮವಹಿಸಲು ಸಚಿವ ಸಂತೋಷ್‌ ಲಾಡ್‌ ಸೂಚನೆ

ಧಾರವಾಡ ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಸೇರಿ ಸುಮಾರು 93,496.98 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮಿತಿ ಮೂಲಕ ಸಮೀಕ್ಷೆ ಮಾಡಿ, ಅಂತಿಮ...

ಧಾರವಾಡ | ಪ್ರವಾದಿ ಪೈಗಂಬರರ ಜನ್ಮ‌ದಿನದ ಅಂಗವಾಗಿ ಉಚಿತ ರಕ್ತದಾನ ಶಿಬಿರ

ಧಾರವಾಡ ನಗರದ ಅಂಜುಮನ್-ಎ-ಇಸ್ಲಾಂ ಸಂಸ್ಥೆಯಲ್ಲಿ ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರರ 1500ನೇ ಜನ್ಮ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು. ಶಿಬಿರವನ್ನು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್...

ಧಾರವಾಡ | ಕಳ್ಳರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು; ವಿಡಿಯೋ ವೈರಲ್!

ಗಣೇಶೋತ್ಸವದ ಗದ್ದಲವನ್ನೇ ಬಂಡವಾಳ ಮಾಡಿಕೊಂಡು ಮನೆಗಳ್ಳತನ ಮಾಡಲು ಮುಂದಾಗಿದ್ದ ಕಳ್ಳರನ್ನು ಸ್ಥಳೀಯರು ಬೆನ್ನಟ್ಟಿ ಪೊಲೀಸರಿಗೆ ಹಿಡಿದುಕೊಟ್ಟಿರುವ ಘಟನೆ ಧಾರವಾಡದ ಕೆಲಗೇರಿಯಲ್ಲಿ ನಡೆದಿದೆ. ಕಳ್ಳರನ್ನು ಬೆನ್ನಟ್ಟಿ ಹಿಡಿದಿರುವ ಸಿಸಿಟಿವಿ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌...

ಧಾರವಾಡ | ಇಂದಿರಾ ಕ್ಯಾಂಟೀನ್‍ ಆಹಾರ ಕುರಿತು ಸಾರ್ವಜನಿಕರ ದೂರು; ಅಧಿಕಾರಿಗಳ ದಿಢೀರ್ ಭೇಟಿ

ಧಾರವಾಡದ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನಲ್ಲಿ ಪೂರೈಸಲಾಗುತ್ತಿರುವ ಆಹಾರದ ಪ್ರಮಾಣ, ಗುಣಮಟ್ಟದ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ಮೇರೆಗೆ ಅಧಿಕಾರಿಗಳ ತಂಡವು ಉಪಹಾರ...

ಧಾರವಾಡ | ಮಳೆಯಿಂದ ಹೆಸರು ಬೆಳೆ ನಾಶ; ಖರೀದಿ ಕೇಂದ್ರ ಸ್ಥಾಪನೆಗೆ ರೈತರ ಮನವಿ

ವಿಪರೀತ ಮಳೆಯಿಂದಾಗಿ ಹೆಸರು ಬೆಳೆ ನಾಶವಾಗಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಿ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಧಾರವಾಡ ಜಿಲ್ಲೆ ನವಲಗುಂದ ತಾಲೂಕು ತಹಶೀಲ್ದಾರ್‌ ಸುಧೀರ್‌ ಸಾಹುಕಾರ ಅವರಿಗೆ ರೈತರು ಮನವಿ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50